Monday, April 8, 2024

ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘನಿ., ಕಲ್ಲಡ್ಕ : ವಾರ್ಷಿಕ ಸಾಮಾನ್ಯ ಸಭೆ

ಬಂಟ್ವಾಳ: ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘನಿ., ಕಲ್ಲಡ್ಕ ಇದರ 2020-2021ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ವಠಾರದಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿಯವರು ಈ ಬಾರಿ ಸಂಘವು ರೂ 7 ಲಕ್ಷ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ 15% ಡಿವಿಡೆಂಡ್ ಹಾಗೂ ಪ್ರತೀ ಲೀ ರಿಗೆ 0.95 ಪೈಸೆಯಂತೆ ಬೋನಸ್ ಘೋಷಿಸಿದರು. ಕೋರೋನಾ ಸಂಕಷ್ಟದ ಸಮಯದಲ್ಲಿ ಕಳೆದ ಬಾರಿ ಸದಸ್ಯರಿಗೆ ಪ್ರತೀ ಲೀ ಹಾಲಿಗೆ 0.75 ಪೈಸೆಯಂತೆ ವಿಶೇಷ ಪ್ರೋತ್ಸಾಹಕ ಧನ ನೀಡಿದ್ದು ಈ ಬಾರಿ ಸದಸ್ಯರಿಗೆ 25 ಕೆ.ಜಿ ಹಾಗೂ 10 ಕೆ ಜಿ ಅಕ್ಕಿಯನ್ನು ಈಗಾಗಲೇ ವಿತರಣೆ ಮಾಡಲಾಗಿದೆ. ಗುಣಮಟ್ಟದ ಹಾಲನ್ನು ಸಂಘಕ್ಕೆ ನೀಡುವ ಉದ್ದೇಶದಿಂದ ಸದಸ್ಯರು ಖರೀದಿ ಮಾಡುವ ಲವಣ ಮಿಶ್ರಣಕ್ಕೆ ಪ್ರತೀ 1 ಕೆ ಜಿ ಗೆ ರೂ 15 ಸಬ್ಸಿಡಿಯನ್ನು 2021 ರ ನವಂಬರ್ 1ರಿಂದ ಸಂಘದಲ್ಲಿ ಜಾರಿಗೊಳಿಸಲಾಗುವುದು. ಸಂಘದ ಬೆಳವಣಿಗೆಯಲ್ಲಿ ಸದಸ್ಯರು ಕೈ ಜೋಡಿಸುವುದರ ಜೊತೆಗೆ ತಾವು ಹೈನುಗಾರಿಕಾ ಕ್ಷೇತ್ರದಲ್ಲಿ ಅಭಿವೃದ್ದಿ ಹೊಂದಬೇಕು ಎಂದರು. ದ ಕ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕಾರಾದ ಡಾ|| ಶ್ರೀನಿವಾಸ್ ರವರು ಮಾತನಾಡಿ ಹಾಲಿನ ಗುಣಮಟ್ಟದ ಬಗ್ಗೆ ಬಹಳಷ್ಟು ಮಾಹಿತಿಯನ್ನು ಸದಸ್ಯರೊಂದಿಗೆ ಹಂಚಿಕೊAಡರು. ಗ್ರಾಮೀಣ ಪ್ರದೇಶದಲ್ಲಿ ಸಂಘದಲ್ಲಿ ಪ್ರತೀ ನಿತ್ಯ 1000 ಕ್ಕಿಂತಲೂ ಅಧಿಕ ಹಾಲು ಸಂಗ್ರಹಣೆಯಾಗುತ್ತಿರುವುದು ಬಹಳ ಸಂತೋಷದಾಯಕ ಎಂದರು. ವಿಸ್ತರಣಾಧಿಕಾರಿ ದೇವರಾಜ್ ರವರು ಒಕ್ಕೂಟದ ವಿವಿಧ ಯೋಜನೆಗಳನ್ನು ಹಾಗೂ ಅನುದಾನಗಳನ್ನು ಸವಿಸ್ತಾರಾವಾಗಿ ಸದಸ್ಯರಿಗೆ ತಿಳಿಸಿದರು.
ಸಭೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳನ್ನು ನಗದು ಪುರಸ್ಕಾರದೊಂದಿಗೆ ಗೌರವಿಸಲಾಯಿತು. ಒಂದು ವರ್ಷದಲ್ಲಿ ಹಾಲು ಹಾಕಿದ ಎಲ್ಲಾ ಸದಸ್ಯರಿಗೂ ಸಂಘದ ವತಿಯಿಂದ ಬಹುಮಾನ ವಿತರಿಸಲಾಯಿತು.
ಸಂಘದ ಉಪಾಧ್ಯಕ್ಷರಾದ ರತ್ನಾಕರ ಪ್ರಭು, ನಿರ್ದೇದಕರಾದ ಸಂಕಪ್ಪ ಕೊಟ್ಟಾರಿ, ರತ್ನಾಕರ ಭಂಡಾರಿ, ಪುಷ್ಪರಾಜ್, ಜಯರಾಮ ಕೊಟ್ಟಾರಿ, ಶಿವಾನಂದ ಪೂಜಾರಿ, ಶ್ರೀಧರ ಶೆಟ್ಟಿ, ಶಾಂತಪ್ಪ ಮೂಲ್ಯ, ಗೋಪಾಲನಾಯ್ಕ, ಧನವತಿ ಹಾಗೂ ಸೌಮ್ಯ ರವರು ಉಪಸ್ಥಿತಿರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೇಶ್ ಕೆ ವರದಿ ಮಂಡಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಿಬ್ಬಂದಿಗಳಾದ ರಾಮಚಂದ್ರ ಹಾಗೂ ರೇವತಿ ಸಹಕರಿಸಿದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...