Sunday, April 14, 2024

ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ನಾಡು-ನುಡಿ ಬೆಳವಣಿಗೆಗೆ ಎಲ್ಲರೂ ಮನಸ್ಸು ಮಾಡಿದಾಗ ಮಾತ್ರ ಕನ್ನಡ ಭಾಷೆ ಉಳಿಯುತ್ತದೆ.  ಕನ್ನಡ ಭಾಷೆಯ ಬೆಳವಣಿಗೆಗೆ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನವನ್ನು ನಡೆಸಬೇಕು. ವಿದ್ಯಾರ್ಥಿಗಳು ಕನ್ನಡ ಮಾತಾಡಲು ಸಮರ್ಪಕವಾಗಿ ಜ್ಞಾನವನ್ನು ಬಳಸಿಕೊಳ್ಳಬೇಕು. ನಮ್ಮ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕನ್ನಡದಲ್ಲಿ ವ್ಯವಹರಿಸುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಸಾಹಿತ್ಯ ಪರಿಷತ್‍ನ ಸದಸ್ಯರು, ಕನ್ನಡ ಉಪನ್ಯಾಸಕರಾದ  ಅಬ್ದುಲ್ ರಹಿಮಾನ್ ಡಿ. ಬಿ. ಇವರು ಅಭಿಪ್ರಾಯಪಟ್ಟರು.

ಅವರು ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ
ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ  ಕೆ. ಎನ್. ಗಂಗಾಧರ ಆಳ್ವ “ ಕನ್ನಡ ನಮ್ಮ ಉಸಿರು, ಕನ್ನಡ ಭಾಷೆ ಕಲಿಯಲು ಸುಲಭ, ಕನ್ನಡ ನಾಡು ಶ್ರೀಗಂಧದ ನಾಡು, ಕನ್ನಡಿಗರು ಕನ್ನಡದ ಬಗ್ಗೆ ಹೆಮ್ಮೆ ಪಡಬೇಕು ” ಎಂದು ತಿಳಿಸಿದರು. ಸಮಾರಂಭದಲ್ಲಿ ಇತ್ತೀಚೆಗೆ ನಿಧನರಾದ ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಯೋಗೀಶ್ ಹಾಗೂ  ಶೇಖರ್ ಕನ್ನಡ ಗೀತೆಗಳ ಗಾಯನ ನಡೆಸಿದರು. ಮ್ಯಾನೇಜರ್  ಅಬ್ದುಲ್ ಕಬೀರ್ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ
ಶ್ರೀನಿವಾಸ್ ಕೆದಿಲ ವಂದಿಸಿದರು.

More from the blog

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...