ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಾವೇಶ ಗೊಂಡ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.2ರ ಗುರುವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರು ಮಾತನಾಡಿ, ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವುದು ಮತ್ತು ಭಗವಂತನ ಸಾನಿಧ್ಯದಲ್ಲಿರುವುದು ಬಹಳಷ್ಟು ಸಂತಸವಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದ ವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಆರೋಗ್ಯಸೇವೆ,ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದರು.
ಬೆಂಗಳೂರಿನ ಎಸ್- ವ್ಯಾಸ ಯುನಿವರ್ಸಿಟಿಯ ನಿವೃತ ಕುಲಪತಿ ಪ್ರೋ. ರಾಮಚಂದ್ರ ಜಿ.ಭಟ್ ಅಧ್ಯಕ್ಷತೆ ವಹಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ.ಸಾರ್ಫಾಜ್ ಚಂದ್ರಗುತ್ತಿ, ಡಾ.ಎಂ.ಎಸ್ ಪದ್ಮ, ಫಾ. ವೀರೇಶ್ ಮೊರಸ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳು, ವಿಧ್ವಾಂಸರು ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.