Saturday, April 6, 2024

ಘಾನದಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಪಾಸಿಟಿವ್ ಪತ್ತೆ: ವೆನ್‍ಲಾಕ್‍ಗೆ ದಾಖಲು-ರೋಗ ಲಕ್ಷಣವಿಲ್ಲ

*ತುರ್ತು ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ*

ಮಂಗಳೂರು : ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏರ್ ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.

ಅವರು ಡಿ. 17ರ ಶುಕ್ರವಾರ ಮಧ್ಯಾಹ್ನ ಏರ್ ಪೋರ್ಟ್‍ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿ, ಘಾನ ದೇಶದಿಂದ ಬಂದ ಪ್ರಯಾಣಿಕರೊಬ್ಬರನ್ನು ನಿನ್ನೆ ರಾತ್ರಿಯೇ ವೆನ್‍ಲಾಕ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್‍ಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಪ್ರಯಾಣಿಕರಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿರುವುದಿಲ್ಲ. ಆ ಪ್ರಯಾಣಿಕ ಆಸೀನವಾಗಿದ್ದ 3 ಸಾಲಿನ ಎದುರು ಹಾಗೂ 3 ಸಾಲಿನ ಹಿಂದಿನ ಪ್ರಯಾಣಿಕರು ಸೇರಿದಂತೆ ಒಟ್ಟು 27 ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿ ಅವರನ್ನು ಆರೋಗ್ಯ ಇಲಾಖೆಯಿಂದ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್ ಮತ್ತು ರ್ಯಾಂಡಮೈಸ್ ಪರೀಕ್ಷೆಗೆ ಒಳಪಡಿಸಿ, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯ ಮಾದರಿಯನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಈಗಾಗಲೇ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿಯವರು ವಿಮಾನ ನಿಲ್ದಾಣದ ಅಧಿಕಾರಿಯೊಂದಿಗೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ, ಇಮಿಗ್ರಿಯೇಶನ್, ಏರ್‍ಸುವಿಧಾ, ಚೆಕ್ಕಿಂಗ್ ಪಾಯಿಂಟ್, ಟ್ರಾನ್‍ಸಿಟ್ ಪ್ಯಾಸಿಂಜರ್ ಹಾಗೂ ರ್ಯಾಂಡಮೈಸ್ ಪರೀಕ್ಷೆಗಳ ಬಗ್ಗೆಯೂ ವಿವರವಾಗಿ ತಿಳಿದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಚೀಫ್ ಏರ್‍ಪೋರ್ಟ್ ಆಫೀಸರ್ ನೀರವ್ ಶಾ, ಕೋವಿಡ್ ನೋಡಲ್ ಅಧಿಕಾರಿ ಡಾ. ಎಚ್. ಅಶೋಕ್, ಏರ್‍ಲೈನ್ ಸ್ಟೇಷನ್ ಮ್ಯಾನೇಜರ್ಸ್, ಟರ್ಮಿನಲ್ ಮ್ಯಾನೇಜರ್, ಇಮಿಗ್ರಿಯೇಶನ್ ಆಫೀಸರ್ಸ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.

More from the blog

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...