ಬೆಂಗಳೂರು : ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ರೂಪಾಂತರಿ ‘ಒಮಿಕ್ರಾನ್’ ಭಾರತದಲ್ಲೂ ಪತ್ತೆಯಾಗಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ದಕ್ಷಿಣ ಆಫ್ರೀಕಾದಿಂದ ಕರ್ನಾಟಕಕ್ಕೆ ಬಂದ 66 ವರ್ಷದ ವೃದ್ದ ಮತ್ತು 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ನಿಟ್ಟುಸಿರು ಬಿಡುತ್ತಿದ್ದ ಜನರಿಗೆ ಬಿಗ್ ಶಾಕ್ ನೀಡುವ ಸುದ್ದಿ ಸಿಕ್ಕಿದ್ದು, ಅಪಾಯಕಾರಿ ವೈರಸ್ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದ ಇಬ್ಬರಿಲ್ಲಿ ಈ ರೂಪಾಂತರಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.