ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಜತೆ ಸೇರಿ ಸರ್ವ ರೀತಿಯ ನೆರವು ನೀಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೩೭ನೇ ವರ್ಷದ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ರವಿವಾರ ನಡೆದ ಪುನೀತ್ ರಾಜ್‌ಕುಮಾರ್ ಯುವರತ್ನ ಪ್ರಶಸ್ತಿ ಪ್ರೊ ಕಬಡ್ಡಿ ಉತ್ಸವದ ಸಮಾರೋಪದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ನಿರಂತರ ೩೭ ವರ್ಷಗಳಿಂದ ಕಬಡ್ಡಿ ಪಂದ್ಯಾಟ ನಡೆಸುತ್ತಿರುವುದರಿಂದ ಪುಂಜಾಲಕಟ್ಟೆಯ ಹೆಸರು ಜಗದಗಲಕ್ಕೆ ಪಸರಿಸುವಂತಾಗಿದೆ. ಕಬಡ್ಡಿ ಆಟಕ್ಕೆ ಮಹತ್ವ ನೀಡಿದ ಸ್ವಸ್ತಿಕ್ ಫ್ರೆಂಡ್ಸ್ ಕಾರ್ಯ ಅಭಿನಂದನೀಯ ಎಂದು ಹೇಳಿದರು.
ಕ್ಲಬ್ ಸ್ಥಾಪಕಾಧ್ಯಕ್ಷ, ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಮಾತನಾಡಿ, ಗ್ರಾಮೀಣ ಕ್ರೀಡೆಯಾಗಿಯೇ ಉಳಿದಿದ್ದ ಕಬಡ್ಡಿಗೆ ಇಂದು ರಾಷ್ಟ್ರೀಯ ಸ್ಥಾನಮಾನ ದೊರಕಿದ್ದು ಉತ್ತುಂಗ ಮಟ್ಟಕ್ಕೇರಿದೆ.ಕಬಡ್ಡಿ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾಧಕರಾದ ಇರುವೈಲ್ ಪಾಣಿಲ ಬಾಡ ಪೂಜಾರಿ, ಕಾಂತಿ ಶೆಟ್ಟಿ ಬೆಂಗಳೂರು,ಡಾ.ನಂದ ಕಿಶೋರ್ ಆಳ್ವ ಮಿತ್ತಳಿಕೆ, ಸದಾಶಿವ ಡಿ.ತುಂಬೆ, ನಿತ್ಯಾನಂದ ಪೂಜಾರಿ ಕೆಂತಲೆ ಅವರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ, ಕೌಶಿಕ್ ಎಚ್. ಮಂಜಲ್‌ಪಲ್ಕೆ , ಮೊಹಮ್ಮದ್ ಸರ್ಫಾಜ್ ಆಲಿ ಉಳ್ಳಾಲ ಅವರಿಗೆ ಪುನೀತ್ ರಾಜ್‌ಕುಮಾರ್ ಯುವರತ್ನ ಪ್ರಶಸ್ತಿ, ಬಳೆಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಶೆಟ್ಟಿ ಅವರಿಗೆ ಅಪ್ಪು ಯುವರತ್ನ ಪ್ರದಾನ ಮಾಡಲಾಯಿತು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್, ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಪಿಲಾತಬೆಟ್ಟು ಗ್ರಾ. ಪಂ. ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಅಧ್ಯಕ್ಷ ಕೆ.ಲಕ್ಷ್ಮೀ ನಾರಾಯಣ ಉಡುಪ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಽಕ್ಷಕ ಕುಮಾರ್‌ಚಂದ್ರ, ಅಮೆಚೂರ್ ಕಬಡ್ಡಿ ಅಸೊಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ, ಉದ್ಯಮಿಗಳಾದ ಹೇಮಚಂದ್ರ ಸಿದ್ದಕಟ್ಟೆ, ಹರೀಂದ್ರ ಪೈ, ಹೇಮಂತ್ ಕುಮಾರ್ ಮೂರ್ಜೆ, ತುಳು ಸಾಹಿತ್ಯ ಅಕಾಡೆಮಿ ಸದಸ್ಯಮಲ್ಲಿಕಾ ಶೆಟ್ಟಿ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಪ್ರಮುಖರಾದ ಕೆ.ಪಿ.ಸುವರ್ಣ, ಮಾಧವ ಸುವರ್ಣ, ತುಂಬೆ ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ತುಂಬೆ, ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು, ಪ್ರದೀಪ್ ನಾಯಕ್,
ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್ಲ ಪಿ., ಪದಾಽಕಾರಿಗಳಾದ ಪ್ರಭಾಕರ ಪಿ.ಎಂ., ಜಯರಾಜ್ ಅತ್ತಾಜೆ , ಅಬ್ದುಲ್ ಹಮೀದ್ ಮಲ್ಪೆ, ಫ್ರಾನ್ಸಿಸ್ ವಿ.ವಿ., ಮಾಧವ ಬಂಗೇರ, ರಂಜಿತ್ ಎಚ್.ಡಿ. ಮತ್ತಿತರರು ಉಪಸ್ಥಿತರಿದ್ದರು.
ದಿನೇಶ್ ಅಮೀನ್ ಸ್ವಾಗತಿಸಿದರು. ರಾಜೇಶ್ ಪಿ. ವಂದಿಸಿದರು.ನಿವೃತ್ತ ಮುಖ್ಯ ಶಿಕ್ಷಕ ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.