ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಹರೇಹಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯಕ್ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here