Wednesday, October 25, 2023

ಕೃಷಿಕ ನದಿಗೆ ಹಾರಿ ಆತ್ಮಹತ್ಯೆ

Must read

ಬಂಟ್ವಾಳ: ಬಂಟ್ವಾಳ ಸಜಿಪಮುನ್ನೂರು ಗ್ರಾಪಂನ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಶನಿವಾರ ಬೆಳಗ್ಗೆ ಪಾಣೆಮಂಗಳೂರಿನ ನಂದಾವರ ಸಂಪರ್ಕದ ಕಿರುಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ಅವರು ಪ್ರಗತಿಪರ ಕೃಷಿಕರಾಗಿದ್ದರು. ಮನೆಯಿಂದ ಬೆಳಗ್ಗೆ ಪೇಟೆಯಿಂದ ಹೊರಟ ಅವರು ಪಾಣೆಮಂಗಳೂರು ಕಿರುಸೇತುವೆ ಬಳಿ ನೀರಿಗೆ ಹಾರಿದ್ದಾರೆ. ಸ್ಥಳೀಯರು ಇದನ್ನು ಗಮನಿಸಿ ಮಾಹಿತಿ ನೀಡಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆದಿದೆ.

More articles

Latest article