Thursday, October 19, 2023

ಕೋವಿಡ್ ಮೂರನೇ ಅಲೆ ಭೀತಿ: ವೀಕೆಂಡ್ ಕರ್ಪ್ಯೂ ಸಹಿತ ಟಫ್ ರೂಲ್ಸ್ ಜಾರಿ

Must read

ರಾಜ್ಯದಲ್ಲಿ ರಾಜ್ಯದಲ್ಲಿ ಒಮಿಕ್ರಾನ್ ಹಾಗೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ರಾಜ್ಯದಲ್ಲಿ ಕೋವಿಡ್ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿ ವರೆಗೆ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಿದೆ.

ಮಂಗಳವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದೀರ್ಘ ಎರಡೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್, ಆರ್ ಅಶೋಕ್ ಸೇರಿ ಹಲವು ತಜ್ಞರ ಜೊತೆ ನಡೆಸಿದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸುವ ನಿರ್ಣಯ ಕೈಗೊಂಡು ಬಳಿಕ ಅತೀ ಹೆಚ್ಚು ಕೋವಿಡ್ ಪ್ರಕರಣ ಹೊಂದಿರುವ ಬೆಂಗಳೂರಿನಲ್ಲಿ ಗುರುವಾರದಿಂದ ಜಾರಿಗೆ ಬರುವಂತೆ 1ರಿಂದ 9ನೇ ತರಗತಿವರೆಗೆ ಶಾಲೆಗಳಿಗೆ ರಜೆ ನೀಡಲು ಆದೇಶ ಹೊರಡಿಸಿದ್ದಾರೆ.

ಕೋವಿಡ್ ಪ್ರಕರಣಗಳ ಕಡಿವಾಣಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರಕಾರ ಆದೇಶ ನೀಡಿದ್ದು ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಜನವರಿ 17 ರವರೆಗೆ ಜಾರಿಯಲ್ಲಿರಲಿದೆ.

More articles

Latest article