Wednesday, April 10, 2024

ಸಜೀಪ ಮುನ್ನೂರು ಗ್ರಾಮದಲ್ಲಿ 1.65 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಕ್ಷೇತ್ರದಲ್ಲಿ ಸುಮಾರು 35 ದೇವಸ್ಥಾನಗಳು ಬ್ರಹ್ಮಕಲಶದ ಹೊಸ್ತಿಲಲ್ಲಿದ್ದು, ಅಂತಹ ಎಲ್ಲಾ ಕ್ಷೇತ್ರಗಳ ಸಂಪರ್ಕ ರಸ್ತೆಗಳನ್ನು ಆದ್ಯತೆಯ ನೆಲೆಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಕ್ಷೇತ್ರದ ಜನರ 9 ವರ್ಷಗಳ ಪ್ರೀತಿ, ವಿಶ್ವಾಸದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಸಜೀಪಮುನ್ನೂರು ಗ್ರಾಮದ 5 ರಸ್ತೆಗಳಿಗೆ ಒಟ್ಟು 1.65 ಕೋ.ರೂ. ವೆಚ್ಚದಲ್ಲಿ ನಡೆದ ಕಾಂಕ್ರೀಟ್ ಕಾಮಗಾರಿಗಳನ್ನು ಉದ್ಘಾಟಿಸಿ ಬಳಿಕ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಗುಳಿಯ ದೇವಸ್ಥಾನ ಹಾಗೂ ಸ್ಥಳೀಯ ಬಿಜೆಪಿ ಸಮಿತಿಯ ವತಿಯಿಂದ ಶಾಸಕರು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಗುತ್ತಿಗೆದಾರ ಧೀರಜ್ ನಾಯ್ಕ್ ಅವರನ್ನು ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ.ಮಾಜಿ ಸದಸ್ಯ ರವೀಂದ್ರ ಕಂಬಳಿ, ಸಜೀಪಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಮುಂಬಯಿನ ಉದ್ಯಮಿ ವಿವೇಕ್ ಶೆಟ್ಟಿ ನಗ್ರಿಗುತ್ತು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಸಂಕೇಶ, ಗ್ರಾ.ಪಂ.ಸದಸ್ಯರಾದ ನವೀನ್ ಅಂಚನ್ ಶಾಂತಿನಗರ, ಸುಮತಿ ಎಸ್.ಖಂಡಿಗ, ಸುಂದರ, ರಾಜೇಶ್ ಮರ್ತಾಜೆ, ಅನಿತಾ, ಗಣೇಶ್ ಕುಲಾಲ್, ಸಂದೀಪ್ ಎಚ್, ಚಂದ್ರಕಲಾ, ದಯಾಲಕ್ಷ್ಮೀ, ಸರೋಜಿನಿ, ಮುಗುಳಿಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ತಾ.ಪಂ.ಮಾಜಿ ಅಧ್ಯಕ್ಷ ಯಶವಂತ ದೇರಾಜೆಗುತ್ತು, ಗುತ್ತಿಗೆದಾರ ಧೀರಜ್ ನಾಯ್ಕ್, ಪ್ರಮುಖರಾದ ಚರಣ್ ಜುಮಾದಿಗುಡ್ಡೆ, ಎಂ.ಕೃಷ್ಣಶ್ಯಾಮ್, ಅರವಿಂದ ಭಟ್ ಆಲಾಡಿ, ರಮಾನಾಥ ರಾಯಿ, ಸುದರ್ಶನ್ ಬಜ, ರೂಪೇಶ್ ಆಚಾರ್ಯ, ಯಶವಂತ ನಾಯ್ಕ್ ನಗ್ರಿ, ವಿನೋದರಾಜ್ ಮುಗುಳಿಯ, ಸೋಮಶೇಖರ್ ಆಲಾಡಿ, ಹರಿಪ್ರಸಾದ್, ದೇವಪ್ಪ, ಇದಿನಬ್ಬ ನಂದಾವರ, ಇಸ್ಮಾಯಿಲ್, ಸುಷ್ಮಾ ಚರಣ್, ಸೀತಾರಾಮ ಅಗೋಳಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ಮುಂಬಯಿ ಪನ್ವೇಲ್ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ದಳಂದಿಲ ಪ್ರಸ್ತಾವನೆಗೈದರು. ಸಜೀಪಮುನ್ನೂರು ಗ್ರಾ.ಪಂ.ಸದಸ್ಯ ಪ್ರವೀಣ್ ಗಟ್ಟಿ ಸ್ವಾಗತಿಸಿದರು. ದಿನಕರ್ ಕಾರ್ಯಕ್ರಮ ನಿರ್ವಹಿಸಿದರು.

ಶಾಸಕರು ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಂಪರ್ಕ ರಸ್ತೆ- 50 ಲಕ್ಷ ರೂ., ಮಂಜಲ್ಪಾದೆ ದೇವಸ್ಥಾನ ಸಂಪರ್ಕ ರಸ್ತೆ- 30 ಲಕ್ಷ ರೂ., ಮುದೆಲ್ ಮುಟ್ಟಿ ಶ್ರೀ ನಾಲ್ಕೈತ್ತಾಯ ದೈವಸ್ಥಾನ ಸಂಪರ್ಕ ರಸ್ತೆ- 55 ಲಕ್ಷ ರೂ., ಪರಾರಿಗುತ್ತು ಭಂಡಾರದಮನೆ ಸಂಪರ್ಕ ರಸ್ತೆ- 10 ಲಕ್ಷ ರೂ., ದಳಂದಿಲ ಸಂಪರ್ಕ ರಸ್ತೆ- 20 ಲಕ್ಷ ರೂ. ಕಾಮಗಾರಿ ಉದ್ಘಾಟಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...