Wednesday, October 18, 2023

“ವೀರಕಂಭ ಗ್ರಾಮ ಅರಣ್ಯ ಸಮಿತಿ’ಯ 2020-21ನೇ ಸಾಲಿನ ವಾರ್ಷಿಕ ಮಹಾಸಭೆ

Must read

ಬಂಟ್ವಾಳ : ಸುಸ್ಥಿರ ಅಭಿವೃದ್ಧಿ ಹಾಗೂ ಜೀವ ವೈವಿಧ್ಯ ರಕ್ಷಣೆ ಗ್ರಾಮ ಅರಣ್ಯ ಸಮಿತಿಯ ಮುಖ್ಯ ಆದ್ಯತೆಯಾಗಬೇಕು ಎಂದು ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಎನ್.ಸುಬ್ರಹ್ಮಣ್ಯ ರಾವ್ ಹೇಳಿದರು.
ಕೆಲಿಂಜದ ಸಾಮಾಜಿಕ ಅರಣ್ಯ ವಲಯ ಕಛೇರಿಯಲ್ಲಿ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಬಂಟ್ವಾಳ ವಲಯ ಇವರ ಆಶ್ರಯದಲ್ಲಿ ಶುಕ್ರವಾರ ನಡೆದ “ವೀರಕಂಭ ಗ್ರಾಮ ಅರಣ್ಯ ಸಮಿತಿ’ಯ 2020-21ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಹೊಸ ನಿರ್ವಹಣಾ ಸಮಿತಿ ರಚನಾ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಕರ್ನಾಟಕ ಸುಸ್ಥಿರ ಅರಣ್ಯ ನಿರ್ವಹಣೆ ಮತ್ತುಜೀವ ವೈವಿಧ್ಯ ಸಂರಕ್ಷಣಾ ಯೋಜನೆಯಲ್ಲಿ ಅರಣ್ಯ ಸಮಿತಿಯನ್ನು ರಚಿಸಲಾಗಿದ್ದು, ರಚನಾತ್ಮಕ ಕಾರ್ಯಗಳೊಂದಿಗೆ ಮುಂದಿನ ದಿನಗಳಲ್ಲಿಯೂ ಹೆಚ್ಚು ಕ್ರಿಯಾಶೀಲರಾಗುವಂತೆ ಅವರು ಸಲಹೆ ನೀಡಿದರು.
ವೀರಕಂಭ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಎಂ ಅಧ್ಯಕ್ಷತೆ ವಹಿಸಿದ್ದರು. , ಇದೇ ಸಂದರ್ಭ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಅಧ್ಯಕ್ಷರಾಗಿ ವಿಶ್ವನಾಥ ಎಂ., ಸದಸ್ಯರಾಗಿ ಜಯಪ್ರಸಾದ್ ಶೆಟ್ಟಿ ಕಲ್ಮಲೆ ಗ್ರಾ.ಪಂ. ಸದಸ್ಯ. ಸಮಿತಿ ಸದಸ್ಯರು ಅಬ್ದುಲ್ ಖಾದರ್ ಚಂದ್ರಶೇಖರ ಬಾಳ್ತಿಲ. ಎಂ.ಆರ್. ನೋಣಯ್ಯ. ಬೇಬಿ ಜೆ.ಅಳ್ವ .ಸಂತೋಷ ಕುಮಾರ್ ಕಲ್ಮಲೆ ., ಮೀನಾಕ್ಷಿ ,ತೇಜಾಕ್ಷಿ .,ಗಿರಿಜಾ, ರೇವತಿ ಆಯ್ಕೆಯಾದರು.
ವಿಟ್ಲ ಹೋಬಳಿಯ ಕಂದಾಯ ನಿರೀಕ್ಷಕ ಮಂಜುನಾಥ್, ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್. ವೇದಿಕೆಯಲ್ಲಿದ್ದರು. ಸದಸ್ಯೆ ರೇವತಿ ಸ್ವಾಗತಿಸಿದರು. ಶಶಿಕಲಾ ವಂದಿಸಿದರು. ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

More articles

Latest article