Saturday, October 21, 2023

ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆಯಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ 2022

Must read

ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆಯಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ 2022

ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆಯ ಮತದಾರ ಸಾಕ್ಷರತಾ ಸಂಘ ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ದಿನಾಂಕ  25-01-2022ರಂದು 12ನೇ ರಾಷ್ಟ್ರೀಯ ಮತದಾರ ದಿನಾಚರಣೆಯ ಅಂಗವಾಗಿ ಯುವಜನತೆ ಮತ್ತು ಮತದಾನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿಶೇಷ ಉಪನ್ಯಾಸ ನೀಡಲು ಆಗಮಿಸಿದ್ದ ಸಂಪನ್ಮೂಲ ವ್ಯಕ್ತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಶೇಖರ್ ಕೆ ಇದರ ಮತದಾರರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಯುವಜನತೆ ಪ್ರಜಾಪ್ರಭುತ್ವ ಹಾಗೂ ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಚುನಾವಣೆಯ ಶ್ರೇಷ್ಠತೆಯನ್ನು ಹಾಗೂ ಪಾವಿತ್ರತೆಯನ್ನು ಉಳಿಸುವಂತೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್. ಕೆ. ಮಾತನಾಡಿ ಮತದಾನ ಮತ್ತು ಚುನಾವಣೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವಕ್ಕೆ ಬದ್ಧತೆ ಹಾಗೂ ಒಕ್ಕೂಟ ವ್ಯವಸ್ಥೆಗೆ ಗೌರವ ಸಲ್ಲಿಸುವಂತೆ ತಿಳಿಸಿದರು.

ಮತದಾರರ ಸಾಕ್ಷರತಾ ಸಂಘದ ಸಂಚಾಲಕರಾದ ನಸೀಮ ಬೇಗಂ ಎಸ್ ಪ್ರಸ್ತಾವಿಸಿದ ಕಾರ್ಯಕ್ರಮದಲ್ಲಿ ಸುಭಾಷ್ ಬಂಗೇರ ನಿರೂಪಿಸಿ ಸುಮಾ ಸ್ವಾಗತಿಸಿ ಪೂರ್ಣಿಮಾ ವಂದಿಸಿ ಚಿತ್ರ ಮತ್ತು ಅನುಷಾ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಮತದಾರರ ಸಾಕ್ಷರತಾ ಸಂಘದ ಸಭೆ ಸಂಚಾಲಕರಾದ ಶ್ರೀನಿವಾಸ್, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕರಾದ ವಿನಯ್ ಎಂ ಎಸ್ ಹಾಗೂ ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕರಾದ ಹನುಮಂತಯ್ಯ ಜಿ ಹೆಚ್ ಉಪಸ್ಥಿತರಿದ್ದರು.

More articles

Latest article