ಬಂಟ್ವಾಳ: ಚುನಾವಣಾ ಕರ್ತವ್ಯದ ಯಶಸ್ವಿ ನಿರ್ವಹಣೆಗಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ವರ್ಚುವಲ್ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿದರು.
ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಯಾಗಿರುವ ಅವರು ಕರ್ನಾಟಕದ ರಾಜ್ಯಪಾಲ ಗೆಹ್ಲೋಟ್ ಅವರ ಮೂಲಕ ನಡೆದ ವರ್ಚುವಲ್ ಸಮಾರಂಭದಲ್ಲಿ ಪ್ರಶಸ್ತಿ ಪಡೆದಿದ್ದಾರೆ.