ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಅನ್ಯ ಧರ್ಮದ ಮದುವೆ ಮನೆಯಲ್ಲಿ ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ವರನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಮಂಗಲ್ಪಡಿ ನಿವಾಸಿ, ಪುತ್ತೂರು ಫಾತಿಮಾ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು(28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ (19) ಬಂಧಿತ ಆರೋಪಿಗಳು. ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.