Friday, April 12, 2024

ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ ಹಾಗೂ ಮಾಹಿತಿ ಶಿಬಿರ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಮತ್ತು ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ ಹಾಗೂ ಮಾಹಿತಿ ಶಿಬಿರ ಇತ್ತೀಚೆಗೆ ಅಮ್ಮುಂಜೆಯಲ್ಲಿ ನಡೆಯಿತು.


ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ, ಅಸಂಘಟಿತ ವಲಯದ ಕಾರ್ಮಿಕರಿಗೆ ದೊರೆಯುವ ಸವಲತ್ತುಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸುವ ಮೂಲಕ ಸಮಾಜದ ಹಿಂದುಳಿದ ವರ್ಗಗಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ವಿಶೇಷವಾಗಿ ಪ್ರಯತ್ನ ನಡೆಸಬೇಕು. ಆ ಮೂಲಕ ಅಂತಹ ಕಾರ್ಮಿಕರನ್ನು ಸಂಘಟಿತರನ್ನಾಗಿ ಮಾಡುವ ಕಾರ್ಯ ನಡೆಸಬೇಕಾಗಿದೆ ಎಂದರು.
ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿ ಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲ ತಾಣದ ಜಿಲ್ಲಾ ಮುಖ್ಯಸ್ಥ ಅರುಣ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ನಿರಂಜನ್ ರೈ, ಪದಾಧಿಕಾರಿ ಹರ್ಷದ್ ಕುಕ್ಕಿಲ, ಪ್ರಮುಖರಾದ ಅಬ್ದುಲ್ ರಜಾಕ್, ಮನೋಜ್, ರವಿರಾಜ್ ಜೈನ್, ಗೋಡ್‍ಫ್ರಿ ಫೆರ್ನಾಂಡಿಸ್, ಗಂಗಾಧರ ಪೂಜಾರಿ, ವೇಣುಗೋಪಾಲ್ ಮೊದಲಾದವರು ಭಾಗವಹಿಸಿದ್ದರು.
ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ರೋಷನ್ ರೈ ಪ್ರಸ್ತಾವನೆಗೈದರು. ಅಮುಂಜೆ ವಲಯ ಕಾಂಗ್ರೆಸ್ ಅದ್ಯಕ್ಷ ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಅಬ್ದುಲ್ ಹಕಿಂ ಅಮ್ಮುಂಜೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...