ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಹೊಟೇಲ್’ಗೆ ನುಗ್ಗಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ರಾತ್ರಿ ನಡೆದಿದೆ.
ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಸಾಗುತ್ತಿದ್ದ ಇಂಡಿಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಟೇಲ್ ಒಳಗೆ ನುಗ್ಗಿದೆ. ಪರಿಣಾಮ ಹೊಟೇಲ್ ಮಾಲಕರಾದ ರಿಯಾಝ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಘಟನೆಯಲ್ಲಿ ಮೂವರು ಹೊಟೇಲ್ ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.