Wednesday, April 10, 2024

ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲವನ್ನು ” ದೈವ ಸಂಕಲ್ಪ” ಯೋಜನೆಯಡಿ ಸೇರಿಸಿ: ಸಚಿವೆ ಶಶಿಕಲಾ ಜೊಲ್ಲೆಗೆ ಶಾಸಕ ರಾಜೇಶ್ ನಾಯ್ಕ್ ಮನವಿ

ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲವನ್ನು ರಾಜ್ಯ ಸರಕಾರದ ನೂತನ ” ದೈವ ಸಂಕಲ್ಪ” ಯೋಜನೆಯಡಿ ಸೇರಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವಂತೆ ಮುಜರಾಯಿ, ಹಜ್ ಮತ್ತು ವಕ್ಸ್ ಸಚಿವೆ ಜೊಲ್ಲೆ ಶಶಿಕಲಾ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಅವರು ಬೆಂಗಳೂರಿನಲ್ಲಿ ಇಂದು ಮನವಿ ನೀಡಿದರು.

ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದಲ್ಲಿ ಫಲ್ಗುಣಿ ನದಿ ತೀರದಲ್ಲಿರುವ ಮಾರ್ಕಾಂಡೇಯ ಪುರಾಣದಲ್ಲಿ ಉಲ್ಲೇಖವಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಕರ್ನಾಟಕ ಸರಕಾರದ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ “ಎ” ಗ್ರೇಡ್ ದೇವಸ್ಥಾನವಾಗಿರುತ್ತದೆ. ಪ್ರಸ್ತುತ ದೇಗುಲದಲ್ಲಿ ಆರಾಧಿಸಲ್ಪಡುತ್ತಿರುವ ದೇವಿಯ ಮೃಣ್ಮಯ ಮೂರ್ತಿಯು ಸುಮಾರು ವರ್ಷಗಳ ಹಿಂದೆ ಸುರತ ಮಹಾರಾಜನಿಂದ ಪ್ರತಿಷ್ಠಾಪಿಸಲ್ಪಟ್ಟಿದ್ದು, ದೇವಾಲಯವು ಸಾವಿರಾರು ವರ್ಷಗಳ ಹಿಂದಿನಿಂದ ಅಸ್ತಿತ್ವದಲ್ಲಿ ಇರುವ ಬಗ್ಗೆ ಶಾಸನಗಳು ಇವೆ. ಕಳೆದ ಎರಡು ವರ್ಷಗಳ ಮೊದಲು ನವೀಕರಣಗೊಂಡ ಈ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ದೇವಿಯ ವಾರ್ಷಿಕ ಜಾತ್ರೆಯು ಪೂರ್ತಿ ಒಂದು ತಿಂಗಳು ಮಾರ್ಚ್ ಮತ್ತು ಎಪ್ರಿಲ್ ತಿಂಗಳ ಮಧ್ಯದಲ್ಲಿ ನಡೆಯುತ್ತಿದ್ದು ಅಪಾರ ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಳ್ಳುತ್ತಾರೆ. ಹೀಗಿರುವಾಗ ಕ್ಷೇತ್ರದ ಮೂಲಸೌಕರ್ಯ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಯು ಅವಶ್ಯವಾಗಿ ಆಗಬೇಕಿದೆ. ಆದುದರಿಂದ ಕ್ಷೇತ್ರದ ಮೂಲಸೌಕರ್ಯ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗಾಗಿ ದೈವ ಸಂಕಲ್ಪ ಯೋಜನೆಯಡಿ ಬಂಟ್ವಾಳ ತಾಲೂಕು ಕಲಿಯಂಗಳ ಗ್ರಾಮದಲ್ಲಿರುವ ಪೊಳಲ ಶ್ರೀ ರಾಜರಾಜೇಶ್ವಲ ದೇಗುಲವನ್ನು ಸೇರಿಸಿ ದೇಗುಲ ಅಭಿವೃದ್ಧಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.
ಇದರ ಜೊತೆಗೆ ಅತೀ ಹೆಚ್ಚು ಧಾರ್ಮಿಕ ಶೃದ್ದಾ ಕೇಂದ್ರಗಳಿರುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಹುತೇಕ ಎಲ್ಲಾ ದೈವ ದೇವಸ್ಥಾನಗಳು ಜೀರ್ಣೋದ್ಧಾರಗೊಳ್ಳುತ್ತಿವೆ.
ಹಾಗಾಗಿ ಈ ಎಲ್ಲಾ ದೈವ ದೇವಸ್ಥಾನಗಳಿಗೆ ಸರಕಾರದ ಧಾರ್ಮಿಕ ಧತ್ತಿ ಇಲಾಖೆಯಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಅನುದಾನವನ್ನು ನೀಡುವಂತೆಯೂ ಮನವಿ ಮಾಡಿದ್ದಾರೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...