ಧರ್ಮ, ಶಿಕ್ಷಣ, ಸಂಸ್ಕೃತಿ, ಸಾಹಿತ್ಯ, ಸಂಗೀತ, ಯಕ್ಷಗಾನ ಸಂವಿಧಾನ ಹೋರಾಟವೇ, ಮೊದಲಾದ ಅನ್ಯಾನ್ಯ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಶ್ರೀ ಮದೆಡನೀರು ಮಠಾಧೀಶರಾಗಿದ್ದ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಬಕ್ಕ ಪರಮಪೂಜ್ಯ ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಮಹಾಸ್ವಾಮಿಗಳವರ ಸಂಸರಣೆ ಹಾಗೂ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ, ರಾಜಕೀಯ, ಸಂಘಟನೆ ಇತ್ಯಾದಿ ಅನೇಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಹಿರಿಯ ಸಾಮಾಜಿಕ ನೇತಾರ ಎ.ಸಿ ಭಂಡಾರಿ ಅವರಿಗೆ ಅಭಿನಂದನೆ ಈ ಸಮಾರಂಭವು ಮಾ 06 ರಂದು ರವಿವಾರ ಬಿ.ಸಿರೋಡ್ ಸ್ಪರ್ಶಾ ಕಲಾಮಂದಿರದಲ್ಲಿ ಪೂರ್ವಾಹ್ನ 10 ಗಂಟೆಯಿಂದ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ| ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಂಚಾಲನ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಅವರು ಹೇಳಿದರು.
ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳವರು ದೀಪೋಜ್ವಲನ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಹರಸಲಿದ್ದಾರೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಪೀಠಾಧಿಪತಿಗಳಾದ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಶೀರ್ವದಿಸಲಿದ್ದಾರೆ. ಮಾಣಿಲ ಶ್ರೀಧಾಮ ಮಹಾಲಕ್ಷ್ಮೀ ಕ್ಷೇತ್ರದ ಯತಿಗಳಾದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮಿಗಳವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಇಂಧನ ಸಚಿವರಾದ ವಿ. ಸುನಿಲ್ ಕುಮಾರ್ ಅಭಿನಂದನಾ ಗ್ರಂಥ
ಬಿಡುಗಡೆ ಗೊಳಿಸುವರು. ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಟಿ. ಶ್ಯಾಮ ಭಟ್ ಐ.ಎ.ಎಸ್
ಅವರು ಸಂಸ್ಕರಣಾ ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಹಿರಿಯ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ ಸಂಸ್ಕರಣಾ ಭಾಷಣ ಮಾಡುವರು. ಪ್ರೊ, ಎಂ. ತುಕರಾಮ ಪೂಜಾರಿ ಅಭಿನಂದನಾ ಭಾಷಣ ಮಾಡುವರು ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಉಳ್ಳಾಲ ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ. ರಮಾನಾಥ ರೈ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾನಿರ್ದೇಶಕ ಸತೀಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಗಂಟೆ 1ರಿಂದ ಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ಧಕ್ಷಾಧಾರ ನಡೆಯಲಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಸಂಸ್ಮರಣಾ ಗ್ರಂಥ ದ ಸಂಪಾದಕ ರಾಜಮಣಿ ರಾಮಕುಂಜ, ಸಮಿತಿ ಪ್ರಮುಖರಾ ಜಯರಾಮ್ ಪೂಜಾರಿ, ಕೃಷ್ಣ ಕುಮಾರ್ ಪೂಂಜ ಅವರು ಉಪಸ್ಥಿತರಿದ್ದರು.