Friday, April 5, 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಕಾರ್ಯಕ್ಷೇತ್ರ ವ್ಯಾಪ್ತಿಯ ಬಿಸಿ ರೋಡ್, ಕೈಕಂಬ ಹಾಗೂ ಮಂಡಾಡಿ ಒಕ್ಕೂಟಗಳ ಪದಗ್ರಹಣ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಕಾರ್ಯಕ್ಷೇತ್ರ ವ್ಯಾಪ್ತಿಯ ಬಿಸಿ ರೋಡ್, ಕೈಕಂಬ ಹಾಗೂ ಮಂಡಾಡಿ ಒಕ್ಕೂಟಗಳ ಪದಗ್ರಹಣ ಹಾಗೂ ತುಂಬೆ ವಲಯದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಸಮಾರಂಭ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧ ಇಲ್ಲಿ ಬಂಟ್ವಾಳ ಪುರಸಭೆಯ ಅಧ್ಯಕ್ಷರಾದ ಶ್ರೀ ಮಹಮ್ಮದ್ ಶರೀಫ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಕಾರಂಬಡೆ ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ,ಸ್ವ ಸಹಾಯ ಸಂಘಗಳ ಮುಖಾಂತರ ಗ್ರಾಮೀಣ ಭಾಗದ ಪುರುಷರು ಹಾಗೂ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ. ಒಂದು ಕಾಲದಲ್ಲಿ ಹಣದ ವ್ಯವಹಾರಕ್ಕಾಗಿ ಅಧಿಕ ಬಡ್ಡಿ ವ್ಯವಹಾರದ ಮೂಲಕ ಹಣ ನೀಡುತ್ತಿದ್ದ ಮಾರುವಾಡಿಗಳ ಕಂತಿನ ವ್ಯಾಪಾರಿಗಳನ್ನು ನಂಬಿದ ಮಹಿಳೆಯರು ಇಂದು ತಮ್ಮ ಸ್ವಂತ ಸ್ವಸಾಯ ಸಂಘಗಳ ಮೂಲಕ ಸುಲಭವಾಗಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆದು ಆರ್ಥಿಕವಾಗಿ ಬಲಿಷ್ಠರಾಗಿ ಜೊತೆಗೆ ಗ್ರಾಮಾಭಿವೃದ್ಧಿ ಯೋಜನೆಯ ಸಿಗುವ ವಿವಿಧ ಸವಲತ್ತು ಪಡೆದು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಮನೆಯೇ ಮೊದಲ ಪಾಠಶಾಲೆ ಆಗಿರೋದರಿಂದ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವ ಜವಾಬ್ದಾರಿ ತಾಯಂದಿರಲ್ಲಿ ಇದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ಎಂ ಎಸ್ ಯೋಜನಾಧಿಕಾರಿ ಮಹಾಂತೇಶ್ ಬಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಯೋಜನೆಯ ಅಧಿಕಾರ, ಹಸ್ತಾಂತರದ ಉದ್ದೇಶ ,ಪದಾಧಿಕಾರಿಗಳ ಕರ್ತವ್ಯ ಬಗ್ಗೆ ಮಾಹಿತಿ ನೀಡಿದರು ಹಾಗೂ ಸರಕಾರವು ಜಾರಿಗೆ ತಂದ ಕೆಲವು ಯೋಜನೆಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕಾರ್ಯರೂಪಕ್ಕೆ ತರುವುದರಲ್ಲಿ ಪ್ರಮುಖ ಸ್ಥಾನವನ್ನು ವಹಿಸಿದೆ ಎಂದರು. ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ ಮಾತನಾಡಿ ಬಂಟ್ವಾಳ ತಾಲೂಕಿನಲ್ಲಿ ಯೋಜನೆಯ ವ್ಯಾಪ್ತಿಯಲ್ಲಿ 7 ವಲಯಗಳಿದ್ದು 7 ಮೇಲ್ವಿಚಾರಕರು 67 ಮಂದಿ ಸೇವಾ ಪ್ರತಿನಿಧಿಗಳ ಮೂಲಕ ಉತ್ತಮ ಸಂಘಟನೆಯನ್ನು ರಚಿಸಿ ಯೋಜನೆಯ ಎಲ್ಲಾ ವಿಶೇಷ ಕಾರ್ಯಕ್ರಮಗಳನ್ನು ಗ್ರಾಮಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಹಕಾರಿಯಾಗಿದೆ ಎಂದರು. ಬಂಟ್ವಾಳ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯ ಸಂರಕ್ಷಣಾಧಿಕಾರಿ ಭಾರತಿ ಇಲಾಖೆಯಿಂದ ಮಹಿಳೆ ಹಾಗೂ ಮಕ್ಕಳಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಬಂಟ್ವಾಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಭಾರತಿ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು . ತುಂಬೆ ವಲಯದ 9 ಒಕ್ಕೂಟಗಳ ನಿಕಟಪೂರ್ವ ಅಧ್ಯಕ್ಷ ಶ್ರೀ ಮಾಧವ ವಲವೂರು ನೂತನ ಅಧ್ಯಕ್ಷರಾದ ಜಯಲಕ್ಷ್ಮಿ ಮಂಡಾಡಿರವರಿಗೆ ತುಂಬೆ ವಲಯದ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಜಯನಂದ ಪಿ, ಮೇಲ್ವಿಚಾರಕ ಕೇಶವ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ, ಬಂಟ್ವಾಳ ಪೊಲೀಸ್ ಠಾಣೆಯ ಎಎಸ್ಐ ಬಶೀರ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಿಸಿ ರೋಡ್ ವಲಯದ ನಿಕಟಪೂರ್ವ ಅಧ್ಯಕ್ಷರಾದ ಶೇಖರ್ ಸಾಮಾನಿ, ಬಿಸಿ ರೋಡ್ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ರಾಮಚಂದ್ರ, ಪದಾಧಿಕಾರಿಗಳಾದ ಲೋಲಾಕ್ಷಿ, ಶೈನಾಜಾ, ಸರಿತಾ, ವಾರಿಜ, ಬಿಸಿ ರೋಡ್ ಒಕ್ಕೂಟದ ನೂತನ ಅಧ್ಯಕ್ಷ ಹೇಮಾವತಿ, ಪದಾಧಿಕಾರಿಗಳಾದ ಯಶೋಧ, ಸವಿತಾ ,ಮಿಶ್ರಿಯ ,ಸಂಧ್ಯಾ, ಮಂಡಾಡಿ ಒಕ್ಕೂಟದ ನೂತನ ಅಧ್ಯಕ್ಷ ಜಯಲಕ್ಷ್ಮಿ, ಪದಾಧಿಕಾರಿಗಳಾದ ವನಜ, ಗೀತಾ, ಆಝೃಯ ಬಾನು. ದಯಾನಂದ ,ಕೈಕಂಬ ಒಕ್ಕೂಟದ ನೂತನ ಅಧ್ಯಕ್ಷ ಶಶಿಕಲಾ ,ಪದಾಧಿಕಾರಿಗಳಾದ ಬಾಬು ಗಟ್ಟಿ, ಪ್ರತಿಭಾ, ಚಿತ್ರ,ಝೀನತ್, ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಯೋಜನೆಯ ಸದಸ್ಯರಿಗೆ ಏರ್ಪಡಿಸಿದ್ದ ಆಟೋಟ ಸ್ಪರ್ಧೆಯ ಬಹುಮಾನಗಳನ್ನು ವಿತರಿಸಲಾಯಿತು. ಶ್ರೀಮತಿ ಸರೋಜಿನಿ ದಿವ್ಯಶ್ರೀ ಅರ್ಪಿತ ಪ್ರಾರ್ಥಿಸಿ , ಸಂಧ್ಯಾ ಸ್ವಾಗತಿಸಿ, ಮಂಡಾಡಿ ಒಕ್ಕೂಟದ ಸೇವಾ ಪ್ರತಿನಿಧಿ ಆಶಾಲತಾ ವರದಿ ವಾಚಿಸಿ, ಬಿಸಿರೋಡು ಒಕ್ಕೂಟದ ಸೇವಾ ಪ್ರತಿನಿಧಿ ವನಜಾಕ್ಷಿ ಬಹುಮಾನ ಪಟ್ಟಿ ವಾಚಿಸಿದರು. ಸವಿತಾ ವಂದಿಸಿ , ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಸತ್ಯಪ್ರಸಾದ್ ಕುಲಾಲ್ ಸಹಕರಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...