ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ವೀರಕಂಭ ಒಕ್ಕೂಟದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಬ ಇಲ್ಲಿಗೆ ಫೈಬರ್ ಚಯರ್ ನೀಡಲಾಯಿತು.
ಈ ಸಂದರ್ಭದಲ್ಲಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ವೀರಕಂಭ ಒಕ್ಕೂಟ ಅಧ್ಯಕ್ಷ ಶಾಂಭವಿ ಆಚಾರ್ಯ, ಸೇವಾ ಪ್ರತಿನಿಧಿ ರೇವತಿ, ಶಾಲಾ ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.