ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಗೆ ನೂತನ ಮುಖ್ಯಾಧಿಕಾರಿಯಾಗಿ ವರ್ಗಾವಣೆಯಾಗಿ ಬಂದಿರುವ ರಮೇಶ್ .ಹೆಚ್.ಆರ್ ಅವರಿಗೆ ಗುರುವಾರ ಅಧಿಕಾರ ಹಸ್ತಾಂತರ ಮಾಡಲಾಯಿತು.
2015 ನೇ ವರ್ಷದಲ್ಲಿ ಗ್ರಾಮ ಪಂಚಾಯತ್ ನಿಂದ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆ ಗೊಂಡ ವಿಟ್ಲ ಪಟ್ಟಣ ಪಂಚಾಯತ್ ಗೆ ಲೀನಾ ಬ್ರಿಟ್ಟೊ ಪ್ರಥಮ ಅಧಿಕೃತ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ 2017 ಜು.24ರಂದು ಮೂಡುಬಿದಿರೆ ಪುರಸಭೆಯಿಂದ ವರ್ಗಾವಣೆ ಗೊಂಡ ಮಾಲಿನಿ ಅವರು ಸುಮಾರು ನಾಲ್ಕು ವರ್ಷ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಕೊಟೇಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ವರ್ಗಾವಣೆ ಗೊಂಡಿದ್ದಾರೆ. ನೂತನ ಮುಖ್ಯಾಧಿಕಾರಿ ಹುಣಸೂರು ನಗರಸಭೆ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.