ಬಂಟ್ವಾಳ: ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.) ಬಂಟ್ವಾಳ ತಾಲೂಕು ಘಟಕ ಇದರ 4 ವರ್ಷದ ಜಿಲ್ಲಾ ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾ ಕೂಟ ಹಾಗೂ ಡಾ! ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಇದರ ಅಂಗವಾಗಿ ಆದಿದ್ರಾವಿಡ ಕ್ರೀಡಾ ಕೂಟ 2022 ಎ.2 ಮತ್ತು ಎ.3 ರಂದು ಬಂಟ್ವಾಳ ಎಸ್.ವಿ.ಎಸ್.ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಆದಿದ್ರಾವಿಡ ಸಮಾಜ ಸೇವಾ ಸಂಘ ದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಚಿವ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಹಿತ ಅನೇಕ ಗಣ್ಯರು ಪಾಲ್ಗೊಳ್ಳುವರು ಎಂದು ಅವರು ತಿಳಿಸಿದ್ದಾರೆ.