ಬಂಟ್ವಾಳ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಕ್ಷೇತ್ರದ ಅಭಿವೃದ್ಧಿ ಹಾಗೂ ಸುಸಜ್ಜಿತ ಗೋಶಾಲೆ ನಿರ್ಮಾಣಕ್ಕಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮನವಿ ಸಲ್ಲಿಸಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು ಅವರು ಸಿಎಂ ಅವರನ್ನು ಸಮ್ಮಾನಿಸಿದರು. ಸಚಿವ ವಿ.ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಸಹಾಯಕ ಕಮೀಷನರ್ ಮದನ್ ಮೋಹನ್ ಸಿ, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋಣಾವಣೆ, ಎಡಿಶನಲ್ ಎಸ್ಪಿ ಕುಮಾರಚಂದ್ರ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ಮೊದಲಾದವರು ಉಪಸ್ಥಿತರಿದ್ದರು.