Sunday, April 7, 2024

ಶಾಲಾ ಶತಮಾನೋತ್ಸವ ಕಾರ್ಯಕ್ರಮ – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ.

ಶಾಲಾ ಶತಮಾನೋತ್ಸವ ಕಾರ್ಯಕ್ರಮವನ್ನು ಎಲ್ಲರ ಸಹಕಾರದಿಂದ ನಮ್ಮ ಊರ ಹಬ್ಬವಾಗಿ ಆಚರಿಸೋಣ ಎಂದು ವೀರಕಂಭ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ದಿನೇಶ್ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಂಜೀವ ಮೂಲ್ಯ ವಹಿಸಿದ್ದರು. ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿಯ ಉಪಾಧ್ಯಕ್ಷರಾದ ನಗ್ರಿಮೂಲೆ ಈಶ್ವರ ಭಟ್ಟ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ಗೌಡ ಮೈರ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಕೊರಗಪ್ಪ ನಾಯ್ಕ, ಸಾವಿತ್ರಿ, ವನಿತಾ, ವೀಣಾ ಸರಿತ ಪ್ರಾಂಕ್, ಉಮಾವತಿ, ರಂಜಿತಾ, ಅಸ್ಲಿಯ, ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಜರಿದ್ದು ಸೂಕ್ತ ಸಲಹೆಗಳನ್ನು ನೀಡಿದರು .ಶಾಲಾ ಶಿಕ್ಷಕಿಯರು ಸಹಕರಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...