Tuesday, April 16, 2024

ಎ.ಎಮ್.ಆರ್ ಅಣಿಕಟ್ಟನ ಗೇಟುಗಳನ್ನು ಮುಟ್ಟಿ ನೀರು ಶೇಖರಿಸಿ ಮತ್ತು ಬಿಡುವ ಬಗ್ಗೆ- ಮುಂಜಾಗ್ರತ ಕ್ರಮ.

ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಮಡಿಮುಗೇರಿನಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ಕಟ್ಟಿರುವ ಎ.ಎಮ್.ಆರ್
ಅಣಿಕಟ್ಟನಲ್ಲಿ ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ನೀರು ಶೇಖರಿಸಲು ಜೂನ್ 01 ರಿಂದ ಅಥವಾ ನಂತರದ ದಿನಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಿದೆ. ಹಾಗಾಗಿ ನದಿ ನೀರಿನ ಮಟ್ಟ ಏರುವುದರಿಂದ ನದಿಯ ತೀರದ ಆಸುಪಾಸಿನ ಜನರು ಸೂಕ್ತವಾದ ಮುಂಜಾಗ್ರತೆಯನ್ನು ವಹಿಸಿಕೊಳ್ಳಲು ತಿಳಿಯಪಡಿಸಬೇಕಾಗಿ ಎಂದು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದಾರೆ.
ಎ.ಎಮ್.ಆರ್. ಅಣಿಕಟ್ಟನಲ್ಲಿ ಶೇಖರಿಸಿದ ನೀರನ್ನು ವಿದ್ಯುಚ್ಛಕ್ತಿ ಉತ್ಪಾದನೆಗಾಗಿ ಬಳಸಿ ಅದೇ ನೀರನ್ನು ವಾಪಾಸು ನದಿಯ ಕೆಳಭಾಗದಲ್ಲಿಜೂನ್ 02 ರಿಂದ ಅಥವಾ ಅದರ ನಂತರದ ದಿನಗಳಲ್ಲಿ ಬಿಡಲಾಗುವುದು. ಅದಲ್ಲದೆ ಮಳೆಗಾಲ ಆರಂಭವಾದ ನಂತರ ನೀರಿನ ಒಳಹರಿವಿನ ಪ್ರಮಾಣವನ್ನು ಹೊಂದಿಕೊಂಡು ಅಣಿಕಟ್ಟಗೆ ಅಳವಡಿಸಿದ ಗೇಟುಗಳನ್ನು ತೆರೆದು ನೀರನ್ನು ಕೆಳಭಾಗಕ್ಕೆ ಅಡಬೇಕಾಗುತ್ತದೆ. ಆದುದರಿಂದ ಜೂನ್ 02 ರಿಂದ ನದಿಯ ಅಣಿಕಟ್ಟನ ಕೆಳಭಾಗದ ಹಾಗೂ ಮೇಲ್ಬಾಗದ ಇಕ್ಕೆಲೆಗಳಲ್ಲಿ ನೀರಿನ ಮಟ್ಟವು ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ಏರಿಳತವಾಗುವುದರಿಂದ ನದಿಯ ದಡದಲ್ಲಿ ವಾಸಿಸುವ ಜನರು ಮತ್ತು ಅವರ ಸಾಕುಪ್ರಾಣಿಗಳ ಸಂರಕ್ಷಣೆಯ ವಿಷಯವಾಗಿ ಜನರಿಗೆ ಮುಂಜಾಗ್ರತೆ ವಹಿಸಲು ಸೂಕ್ತ ನಿರ್ದೇಶನ ನೀಡಬೇಕಾಗಿ ವಿನಂತಿಸುತ್ತೇವೆ ಎಂದು ತಹಶೀಲ್ದಾರ್ ಅವರಿಗೆ ಪತ್ರ ಬರೆದಿದ್ದಾರೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...