ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಮಡಿಮುಗೇರಿನಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ಕಟ್ಟಿರುವ ಎ.ಎಮ್.ಆರ್
ಅಣಿಕಟ್ಟನಲ್ಲಿ ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ನೀರು ಶೇಖರಿಸಲು ಜೂನ್ 01 ರಿಂದ ಅಥವಾ ನಂತರದ ದಿನಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಿದೆ. ಹಾಗಾಗಿ ನದಿ ನೀರಿನ ಮಟ್ಟ ಏರುವುದರಿಂದ ನದಿಯ ತೀರದ ಆಸುಪಾಸಿನ ಜನರು ಸೂಕ್ತವಾದ ಮುಂಜಾಗ್ರತೆಯನ್ನು ವಹಿಸಿಕೊಳ್ಳಲು ತಿಳಿಯಪಡಿಸಬೇಕಾಗಿ ಎಂದು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದಾರೆ.
ಎ.ಎಮ್.ಆರ್. ಅಣಿಕಟ್ಟನಲ್ಲಿ ಶೇಖರಿಸಿದ ನೀರನ್ನು ವಿದ್ಯುಚ್ಛಕ್ತಿ ಉತ್ಪಾದನೆಗಾಗಿ ಬಳಸಿ ಅದೇ ನೀರನ್ನು ವಾಪಾಸು ನದಿಯ ಕೆಳಭಾಗದಲ್ಲಿಜೂನ್ 02 ರಿಂದ ಅಥವಾ ಅದರ ನಂತರದ ದಿನಗಳಲ್ಲಿ ಬಿಡಲಾಗುವುದು. ಅದಲ್ಲದೆ ಮಳೆಗಾಲ ಆರಂಭವಾದ ನಂತರ ನೀರಿನ ಒಳಹರಿವಿನ ಪ್ರಮಾಣವನ್ನು ಹೊಂದಿಕೊಂಡು ಅಣಿಕಟ್ಟಗೆ ಅಳವಡಿಸಿದ ಗೇಟುಗಳನ್ನು ತೆರೆದು ನೀರನ್ನು ಕೆಳಭಾಗಕ್ಕೆ ಅಡಬೇಕಾಗುತ್ತದೆ. ಆದುದರಿಂದ ಜೂನ್ 02 ರಿಂದ ನದಿಯ ಅಣಿಕಟ್ಟನ ಕೆಳಭಾಗದ ಹಾಗೂ ಮೇಲ್ಭಾಗದ ಇಕ್ಕೆಲೆಗಳಲ್ಲಿ ನೀರಿನ ಮಟ್ಟವು ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ಏರಿಳತವಾಗುವುದರಿಂದ ನದಿಯ ದಡದಲ್ಲಿ ವಾಸಿಸುವ ಜನರು ಮತ್ತು ಅವರ ಸಾಕುಪ್ರಾಣಿಗಳ ಸಂರಕ್ಷಣೆಯ ವಿಷಯವಾಗಿ ಜನರಿಗೆ ಮುಂಜಾಗ್ರತೆ ವಹಿಸಲು ಸೂಕ್ತ ನಿರ್ದೇಶನ ನೀಡಬೇಕಾಗಿ ವಿನಂತಿಸುತ್ತೇವೆ ಎಂದು ತಹಶೀಲ್ದಾರ್ ಅವರಿಗೆ ಪತ್ರ ಬರೆದಿದ್ದಾರೆ.