Sunday, April 7, 2024

ಎ.ಎಮ್.ಆರ್ ಅಣಿಕಟ್ಟನ ಗೇಟುಗಳನ್ನು ಮುಟ್ಟಿ ನೀರು ಶೇಖರಿಸಿ ಮತ್ತು ಬಿಡುವ ಬಗ್ಗೆ- ಮುಂಜಾಗ್ರತ ಕ್ರಮ.

ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಮಡಿಮುಗೇರಿನಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ಕಟ್ಟಿರುವ ಎ.ಎಮ್.ಆರ್

ಅಣಿಕಟ್ಟನಲ್ಲಿ ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ನೀರು ಶೇಖರಿಸಲು ಜೂನ್ 01 ರಿಂದ ಅಥವಾ ನಂತರದ ದಿನಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಿದೆ. ಹಾಗಾಗಿ ನದಿ ನೀರಿನ ಮಟ್ಟ ಏರುವುದರಿಂದ ನದಿಯ ತೀರದ ಆಸುಪಾಸಿನ ಜನರು ಸೂಕ್ತವಾದ ಮುಂಜಾಗ್ರತೆಯನ್ನು ವಹಿಸಿಕೊಳ್ಳಲು ತಿಳಿಯಪಡಿಸಬೇಕಾಗಿ ಎಂದು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದಾರೆ.

ಎ.ಎಮ್.ಆರ್. ಅಣಿಕಟ್ಟನಲ್ಲಿ ಶೇಖರಿಸಿದ ನೀರನ್ನು ವಿದ್ಯುಚ್ಛಕ್ತಿ ಉತ್ಪಾದನೆಗಾಗಿ ಬಳಸಿ ಅದೇ ನೀರನ್ನು ವಾಪಾಸು ನದಿಯ ಕೆಳಭಾಗದಲ್ಲಿಜೂನ್ 02 ರಿಂದ ಅಥವಾ ಅದರ ನಂತರದ ದಿನಗಳಲ್ಲಿ ಬಿಡಲಾಗುವುದು. ಅದಲ್ಲದೆ ಮಳೆಗಾಲ ಆರಂಭವಾದ ನಂತರ ನೀರಿನ ಒಳಹರಿವಿನ ಪ್ರಮಾಣವನ್ನು ಹೊಂದಿಕೊಂಡು ಅಣಿಕಟ್ಟಗೆ ಅಳವಡಿಸಿದ ಗೇಟುಗಳನ್ನು ತೆರೆದು ನೀರನ್ನು ಕೆಳಭಾಗಕ್ಕೆ ಅಡಬೇಕಾಗುತ್ತದೆ. ಆದುದರಿಂದ ಜೂನ್ 02 ರಿಂದ ನದಿಯ ಅಣಿಕಟ್ಟನ ಕೆಳಭಾಗದ ಹಾಗೂ ಮೇಲ್ಭಾಗದ  ಇಕ್ಕೆಲೆಗಳಲ್ಲಿ ನೀರಿನ ಮಟ್ಟವು ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ಏರಿಳತವಾಗುವುದರಿಂದ ನದಿಯ ದಡದಲ್ಲಿ ವಾಸಿಸುವ ಜನರು ಮತ್ತು ಅವರ ಸಾಕುಪ್ರಾಣಿಗಳ ಸಂರಕ್ಷಣೆಯ ವಿಷಯವಾಗಿ ಜನರಿಗೆ ಮುಂಜಾಗ್ರತೆ ವಹಿಸಲು ಸೂಕ್ತ ನಿರ್ದೇಶನ ನೀಡಬೇಕಾಗಿ ವಿನಂತಿಸುತ್ತೇವೆ ಎಂದು ತಹಶೀಲ್ದಾರ್ ಅವರಿಗೆ ಪತ್ರ ಬರೆದಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...