Sunday, April 7, 2024

ಮೇ 7,8 ರಂದು ಆರ್ಡಿ ಕೆರ್ಜಾಡಿ ಚಿತ್ತೇರಿ ಶ್ರೀ ದುರ್ಗಾಪರಮೇಶ್ವರಿ ಬ್ರಹ್ಮಕಲಶಾಭಿಷೇಕ, ವಾರ್ಷಿಕ ವರ್ಧಂತಿ ಮಹೋತ್ಸವ:*ಧಾರ್ಮಿಕ ಕಳೆಗಟ್ಟಿದ ದೇಗುಲ*ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ*

ಮೇ 7,8 ರಂದು ಆರ್ಡಿ ಕೆರ್ಜಾಡಿ ಚಿತ್ತೇರಿ ಶ್ರೀ ದುರ್ಗಾಪರಮೇಶ್ವರಿ ಬ್ರಹ್ಮಕಲಶಾಭಿಷೇಕ, ವಾರ್ಷಿಕ ವರ್ಧಂತಿ ಮಹೋತ್ಸವ

 

*ಧಾರ್ಮಿಕ ಕಳೆಗಟ್ಟಿದ ದೇಗುಲ*

*ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ*

 

 

ಆರ್ಡಿ :
ಆರ್ಡಿ ಕೆರ್ಜಾಡಿ ಚಿತ್ತೇರಿ ಶ್ರೀ ದುರ್ಗಾಪರಮೇಶ್ವರೀ ಸಪರಿವಾರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ, ವಾರ್ಷಿಕ ವರ್ಧಂತಿ ಮಹೋತ್ಸವ ಮೇ 7 ಮತ್ತು 8 ರಂದು ಸಂಭ್ರಮದಿಂದ ನಡೆಯಲಿದೆ.
ಸೌಕೂರು ವೇದಮೂರ್ತಿ ಶ್ರೀ ಚಂದ್ರಶೇಖರ ಅಡಿಗ ಇವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮೇ 7 ರಂದು ಬೆಳಿಗ್ಗೆ 8.30 ಕ್ಕೆ ಫಲನ್ಯಾಸ, ಗುರು ಗಣಪತಿ ಪೂಜೆ, ಪುಣ್ಯಾಹ, ಗಣಯಾಗ, ನವಗ್ರಹ ಪೂಜೆ, ಸಪರಿವಾರ ಪೂಜೆ ನಡೆಯಲಿವೆ.
ಸಂಜೆ 5:30 ಕ್ಕೆ ಗುರು ಗಣಪತಿ ಪೂಜೆ, ಪುಣ್ಯಾಹ, ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಪೂಜಾ ಬಲಿ, ಅಷ್ಟೋತ್ತರ ಶತ ಪರಿಕಲಶ ಸಹಿತ ಬ್ರಹ್ಮಕಲಶ ಸ್ಥಾಪನೆ ಇತ್ಯಾದಿ ನಡೆಯಲಿದೆ.

ಮೇ 8 ರಂದು ಬೆಳಗ್ಗೆ 8:30 ಕ್ಕೆ ಸಪ್ನಧಿವಾಸ ಹೋಮ, ಕಲಶಾಭಿಷೇಕ, 10 ಕ್ಕೆ ಹಣ್ಣುಕಾಯಿ, ಹರಿವಾಣ ನೈವೇದ್ಯ, 11 ಕ್ಕೆ ತುಲಾಭಾರ ಸೇವೆ, 11:30 ಕ್ಕೆ ಬ್ರಹ್ಮಕಲಶಾಭಿಷೇಕ, 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 12:30 ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 6:30 ಕ್ಕೆ ರಂಗಪೂಜೆ ಸಹಿತ ಸಪರಿವಾರ ಪೂಜೆ, ಸಂದರ್ಶನ, ಸುತ್ತುಬಲಿ, ಪ್ರಸಾದ ವಿತರಣೆ, ರಾತ್ರಿ 7:30 ಕ್ಕೆ ಕುಂದ ಕನ್ನಡ ಹಾಸ್ಯ ಮಾಂತ್ರಿಕ ಮನು ಹಂದಾಡಿ ಅವರಿಂದ ಹಾಸ್ಯ ಸಂಜೆ ನಡೆಯಲಿದೆ.

ರಾತ್ರಿ 8:30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, 9 ಕ್ಕೆ ಅನ್ನಸಂತರ್ಪಣೆ, 10: 30 ಕ್ಕೆ ಕಲ್ಲುಕುಟಿಗ ಸಿರಿ ಸಿಂಗಾರ ಕೋಲ ಸೇವೆ ನಡೆಯಲಿದೆ.

ಮೇ 8 ರಂದು ಸಂಜೆ 8:30 ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾ ವಿದ್ಯಾಲಯಗಳ ಹಾಗೂ ಆಸ್ಪತ್ರೆಯ ಪ್ರಾಚಾರ್ಯ ಮತ್ತು ಮುಖ್ಯವೈದ್ಯಾಧಿಕಾರಿ ಡಾ. ಪ್ರಶಾಂತ ಶೆಟ್ಟಿ ಉಪಸ್ಥಿತರಿರುವರು. ವಿಶ್ವ ಹಿಂದು ಪರಿಷತ್ತಿನ ಪ್ರೇಮಾನಂದ ಶೆಟ್ಟಿ ಧಾರ್ಮಿಕ ಉಪನ್ಯಾಸ ನೀಡುವರು. ಕೆರ್ಜಾಡಿ ಶ್ರೀದುರ್ಗಾಪರಮೇಶ್ವರಿ ಸಪರಿವಾರ ದೇವಸ್ಥಾನದ ಗೌರವಾಧ್ಯಕ್ಷ ಬಾಬು ಶೆಟ್ಟಿ ಅಧ್ಯಕ್ಷತೆ ವಹಿಸುವರು. ಬೆಳ್ವೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್. ಚಂದ್ರಶೇಖರ್ ಶೆಟ್ಟಿ, ಶ್ರೀ ಗಣೇಶ ಸಮೂಹ ಸಂಸ್ಥೆಗಳು ಹಾಗೂ ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಬಿ.ಗಣೇಶ ಕಿಣಿ, ಶ್ರೀದುರ್ಗಾದೇವಿ ಕ್ಯಾಶ್ಯೂ ಇಂಡಸ್ಟ್ರೀಸ್ ನ ಪ್ರಶಾಂತ್ ಶೆಟ್ಟಿ, ಅರಸಮ್ಮಕಾನು ಶ್ರೀ ನಾಗಕನ್ನಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಅಧ್ಯಕ್ಷ ಬಿ. ಚಂದ್ರಶೇಖರ ಶೆಟ್ಟಿ, ಆರ್ಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕರುಣಾಕರ ತೋಳಾರ್, ಮಡಾಮಕ್ಕಿ ಮಹತೋಭಾರ ಶ್ರೀ ವೀರಭದ್ರ ದೇವಸ್ಥಾನದ ಅಧ್ಯಕ್ಷ ಶಶಿಧರ ಶೆಟ್ಟಿ, ಕುದ್ರುಬೀಡು ಕೊಳ್ಕೆಬೈಲು ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ರತ್ನಾಕರ ಶೆಟ್ಟಿ, ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ಚಂದ್ರ ಹೆಗ್ಡೆ, ಶೇಡಿಮನೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅರುಣ್ ಪಂಡಿತ್, ಕೆರ್ಜಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಬಾಗಳಮಕ್ಕಿ ಉಪಸ್ಥಿತರಿರುವರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ರಂಗ ಪಾಣ ಅವರ ಸನ್ಮಾನ ನಡೆಯಲಿದೆ. ಗ್ರಾಮ ಪಂಚಾಯತ್ ಸದಸ್ಯರಾದ ರೋಹಿತ ಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ಪೂಜಾರಿ, ಲಲಿತಾ ಉಪಸ್ಥಿತರಿರುವರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...