Thursday, October 26, 2023

ಕಾರ್ಮಿಕ ದಿನದ ಕಾನೂನು ಅರಿವು- ನೆರವು ಕಾರ್ಯಕ್ರಮ

Must read

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ ಹಾಗೂ ಬಂಟ್ವಾಳ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಕಾರ್ಮಿಕ ದಿನದ ಕಾನೂನು ಅರಿವು- ನೆರವು ಕಾರ್ಯಕ್ರಮ ಬಿ.ಸಿ.ರೋಡಿನ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಽÃಶೆ ಮತ್ತು ಜೆಎಂಎಫ್‌ಸಿ ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಭಾಗ್ಯಮ್ಮ ಮಾತನಾಡಿ, ಕಾರ್ಮಿಕರಿಗೆ ಕಾನೂನಿನ ಅರಿವು, ಇಲಾಖೆಯಿಂದ ಸಿಗುವ ಸರಕಾರಿ ಸೌಲಭ್ಯಗಳ ಕುರಿತು ಮಾಹಿತಿ ಇದ್ದಾಗ ಬಂಡವಾಳಶಾಹಿಗಳ ಶೋಷಣೆಯಿಂದ ದೂರವಾಗುವ ಜತೆಗೆ ಸ್ವಾಭಿಮಾನ ಬದುಕು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಿಡಿಪಿಒ ಗಾಯತ್ರಿ ಕಂಬಳಿ ಮಾತನಾಡಿ, ಕಾರ್ಮಿಕರ ಹೋರಾಟದ ಭಾಗವಾಗಿ ಕಾರ್ಮಿಕ ದಿನವನ್ನು ಆಚರಿಸಲಾಗುತ್ತಿದ್ದು, ಅದರ ಬಳಿಕವೇ ಕಾರ್ಮಿಕರ ಹಕ್ಕುಗಳು, ಕರ್ತವ್ಯದ ಅವಽ ಮೊದಲಾದ ಕಾನೂನುಗಳು ರೂಪಿತಗೊಂಡವು ಎಂದರು.
ಕಾರ್ಮಿಕರ ಹಕ್ಕುಗಳು ಹಾಗೂ ಕರ್ತವ್ಯದ ಕುರಿತು ಮಾಹಿತಿ ನೀಡಿದ ಬಂಟ್ವಾಳದ ಕಾರ್ಮಿಕ ನಿರೀಕ್ಷಕಿಮೆರ್ಲಿನ್ ಡಿಸೋಜ ಅವರು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ.ಗಣೇಶಾನಂದ ಸೋಮಯಾಜಿ, ಸಹಾಯಕ ಸರಕಾರಿ ಅಭಿಯೋಜಕಿ ಹರಿಣಿಕುಮಾರಿ ಡಿ, ವಕೀಲರ ಸಂಘದ ಉಪಾಧ್ಯಕ್ಷ ಮೋಹನ್ ಪ್ರಭು ಉಪಸ್ಥಿತರಿದ್ದರು.

More articles

Latest article