


ವಿಟ್ಲ: ಚಲಿಸುತ್ತಿದ್ದ ರೈಲು ಬಡಿದು ಸಾವನ್ನಪ್ಪಿರುವ ಘಟನೆ ಪುತ್ತೂರಿನ ಕಬಕ ಸಮೀಪದ ಮಿತ್ತೂರಿನಲ್ಲಿ ಮಂಗಳವಾರ ನಡೆದಿದೆ.
ಕಡಬ ತಾಲೂಕಿನ ಕೊಯಿಲ ಗ್ರಾಮದ ಪುಣಿಕೆತ್ತಡಿ ನಿವಾಸಿ ಜಗದೀಶ ಹಾಗೂ ಹೇಮಾವತಿ ದಂಪತಿಯ ಪುತ್ರ ಕಾರ್ತಿಕ್(24) ಎಂದು ಗುರುತಿಸಲಾಗಿದೆ.
ಮಿತ್ತೂರುನಲ್ಲಿ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬರುತ್ತಿದ್ದ ರೈಲು ಬಡಿದು ಸ್ಥಳದಲ್ಲೇ ಕಾರ್ತಿಕ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.


