Saturday, April 20, 2024

ಚುನಾವಣೆಯ ದೃಷ್ಟಿಯಿಂದ ಮುಂದಿನ ಪ್ರತಿಯೊಂದು ದಿನವೂ ಕಾರ್ಯಕರ್ತರಿಗೆ ಅತ್ಯಂತ ಪ್ರಮುಖ: ಶಾಸಕ ರಾಜೇಶ್ ನಾಯ್ಕ್

ಬಿಜೆಪಿ ಬಂಟ್ವಾಳ ಮಂಡಲದ ಕಾರ್ಯನಿರ್ವಾಣಾ ತಂಡದ ಸಭೆ ಚಿದಾನಂದ ರೈ ಇವರ ಅಧ್ಯಕ್ಷತೆಯಲ್ಲಿ ಇಂದು ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು. ತಾಯಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಭೆಗೆ ಚಾಲನೆ ನೀಡಿದ ಜನಪ್ರಿಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ” ಬಿಜೆಪಿಯಲ್ಲಿ ಸಂಘಟನಾತ್ಮಕ ಚಟುವಟಿಕೆಗಳು ನಿರಂತರ ನಡೆಯುತ್ತಿರುತ್ತದೆ. ಆದರೆ ಚುನಾವಣೆಯ ದೃಷ್ಟಿಯಿಂದ ಮುಂದಿನ ಪ್ರತಿಯೊಂದು ದಿನವೂ ಕಾರ್ಯಕರ್ತರಿಗೆ ಅತ್ಯಂತ ಪ್ರಮುಖ. ಸಂಘಟನಾ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಲು ರಾಜ್ಯ ಬಿಜೆಪಿ ಬಹಳಷ್ಟು ಕಾರ್ಯಯೋಜನೆಗಳನ್ನು ರೂಪಿದೆ. ಮತಗಳಿಕೆಯಲ್ಲಿ ದುರ್ಬಲವಾಗಿರುವ ಬೂತ್ ಗಳ ಸಶಕ್ತೀಕರಣಗೊಳಿಸುವ ಮಂಡಲದ ಕಾರ್ಯಕ್ರಮಗಳಲ್ಲಿ ಶಾಸಕನಾದ ನಾನೂ ಭಾಗವಹಿಸುತ್ತೇನೆ” ಎಂದರು. ಮಂಡಲ ಪ್ರಭಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ಮಂಡಲದ ವರದಿಗಳ ವಿಶ್ಲೇಷಣೆಯೊಂದಿಗೆ ಮುಂದಿನ ತಿಂಗಳ ಸಂಘಟನಾತ್ಮಕ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು 8 ವರ್ಷಗಳ ಆಡಳಿತವನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ “ಸೇವೆ – ಸುಶಾಸನ – ಬಡವರ ಕಲ್ಯಾಣ” ಎಂಬ ಹೆಸರಿನಲ್ಲಿ ಮಂಡಲದಲ್ಲಿ ಮೇ 31ರಿಂದ ಎಪ್ರಿಲ್ 15ರವರೆಗೆ 17 ವಿಧದ ಕಾರ್ಯಕ್ರಮಗಳ ಮೂಲಕ ಈವರೆಗೆ ತಲಪದ ಸಾಮಾನ್ಯ ಜನತೆಯನ್ನು ತಲಪುವ ಕಾರ್ಯಯೋಜನೆಯ ಮಾಹಿತಿಯನ್ನು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ನೀಡಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕರು ಸಮಾರೋಪ ನುಡಿಗಳನ್ನಾಡಿದರು. ಕಿಶೋರ್ ಪಲ್ಲಿಪ್ಪಾಡಿ ವಂದೇ ಮಾತರಂ ಗೀತೆ ಹಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು. ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಂದನಾರ್ಪಣೆಗೈದರು. ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...