Saturday, April 6, 2024

ಜನರ ಜತೆಗೆ ಇರುವ ಶಾಸಕರಾಗಿ ರಾಜೇಶ್ ನಾಯ್ಕ್ ಗುರುತಿಸಿಕೊಂಡಿರುವುದು ಬಂಟ್ವಾಳ ಕ್ಷೇತ್ರದ ಜನತೆಯ ಹೆಗ್ಗಳಿಕೆಯಾಗಿದೆ:ಒಡಿಯೂರು ಶ್ರೀ

ಬಂಟ್ವಾಳ: ತುಳುನಾಡು ಧರ್ಮದ ನಾಡು ಎಂಬ ಹೆಗ್ಗಳಿಕೆಯನ್ನು ಗಳಿಸಿಕೊಂಡಿದ್ದು, ಧರ್ಮದ ತಡೆಗೋಡೆಯೊಳಗೆ ನಾವು ಬದುಕಿದಾಗ ನೆಮ್ಮದಿಯ ಬದುಕನ್ನು ಕಾಣಲು ಸಾಧ್ಯ. ಧರ್ಮ ಶ್ರದ್ಧೆಯಲ್ಲಿ ಉಳಿಕೆ ಮಾಡಿದಾಗ ಧರ್ಮದ ಪ್ರೀತಿ ನಮ್ಮನ್ನು ಮುಂದೆ ನಡೆಸುತ್ತದೆ. ಜನರ ಜತೆಗೆ ಇರುವ ಶಾಸಕರಾಗಿ ರಾಜೇಶ್ ನಾಯ್ಕ್ ಗುರುತಿಸಿಕೊಂಡಿರುವುದು ಬಂಟ್ವಾಳ ಕ್ಷೇತ್ರದ ಜನತೆಯ ಹೆಗ್ಗಳಿಕೆಯಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಶುಕ್ರವಾರ ರಾತ್ರಿ ಸಜೀಪಮೂಡ ಗ್ರಾಮದ ನಗ್ರಿಗುತ್ತು ದೈವಸ್ಥಾನದ ಬಳಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ೩೦ ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ತಡೆಗೋಡೆಯನ್ನು ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.


ಇತಿಮಿತಿಯ ಬದುಕು ಬಹಳ ಶ್ರೇಷ್ಠವಾಗಿದ್ದು, ದೈವದ ಚಾವಡಿ ಇರುವ ತುಳುನಾಡಿನಲ್ಲಿ ಹುಟ್ಟಿರುವುದೇ ದೊಡ್ಡ ಪುಣ್ಯವಾಗಿದೆ ಎಂದರು.
ತಡೆಗೋಡೆಯನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಯಾವುದೇ ಗ್ರಾಮದ ಅಭಿವೃದ್ಧಿಗೆ ಕುರಿತು ಊರಿನ ಜನತೆ ಇಚ್ಛಾಶಕ್ತಿ ಪ್ರದರ್ಶಿಸಿದರೆ ಯಾವುದೇ ಕೆಲಸ ಕಷ್ಟವಲ್ಲ. ಬಂಟ್ವಾಳದ ೨೦೦ಕ್ಕೂ ಅಧಿಕ ಧಾರ್ಮಿಕ ಕ್ಷೇತ್ರಗಳ ರಸ್ತೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನ ನೀಡಲಾಗಿದೆ. ದ.ಕ.ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳಲ್ಲಿ ೧೫೦೦ ಕೋ.ರೂ.ಗಳಷ್ಟು ವ್ಯವಹಾರ ನಡೆಯುವ ಮೂಲಕ ವಿಶೇಷ ಧಾರ್ಮಿಕ ಕ್ರಿಯೆಗಳು ನಡೆಯುತ್ತಿದೆ. ನಂದಾವರ ದೇವಸ್ಥಾನಕ್ಕೆ ನೇತ್ರಾವತಿ ಕಿನಾರೆಯಲ್ಲಿ ಸೇತುವೆ ಸಹಿತ ರಸ್ತೆಯ ಸಂಪರ್ಕದ ಯೋಜನೆಗೆ ೧೦ ಕೋ.ರೂ.ಮಂಜೂರಾಗಿ ಟೆಂಡರ್ ಹಂತದಲ್ಲಿದ್ದು, ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ವೇದಿಕೆಯಲ್ಲಿ ಸಜೀಪಮಾಗಣೆಯ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಸಜೀಪಗುತ್ತಿನ ಗಡಿಪ್ರಧಾನರಾದ ಮುಂಡಪ್ಪ ಶೆಟ್ಟಿ ಯಾನೆ ಕೋಚು ಭಂಡಾರಿ, ಗುತ್ತಿನ ಹಿರಿಯರಾದ ಜಯರಾಮ ಶೆಟ್ಟಿ ನಗ್ರಿಗುತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವೇಕ್ ಶೆಟ್ಟಿ ನಗ್ರಿಗುತ್ತು ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ‌೧೨೦೦ ಕೋ.ರೂ.ಗಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ೧೮೦ಕ್ಕೂ ಅಧಿಕ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೊಂಡಿದೆ. ಕ್ಷೇತ್ರದ ಅಭಿವೃದ್ಧಿಯ ಕುರಿತು ವಿಶೇಷ ಕಾಳಜಿ ಹೊಂದಿರುವ ಶಾಸಕ ರಾಜೇಶ್ ನಾಯ್ಕ್ ಅವರ ಪ್ರಯತ್ನದ ಫಲವಾಗಿ ನಗ್ರಿಗುತ್ತಿಗೆ ತಡೆಗೋಡೆ ನಿರ್ಮಾಣವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಗ್ರಿಗುತ್ತಿನ ಪರವಾಗಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಸಮ್ಮಾನಿಸಲಾಯಿತು. ಗುತ್ತಿಗೆದಾರರ ಧೀರಜ್ ನಾಯ್ಕ್ ಹಾಗೂ ಮೇಲ್ವಿಚಾರಕ ದಿನೇಶ್ ಅವರನ್ನು ಗೌರವಿಸಲಾಯಿತು. ರೋಹಿತ್ ಶೆಟ್ಟಿ ನಗ್ರಿಗುತ್ತು ಸ್ವಾಗತಿಸಿದರು. ಕೃಷ್ಣ ಶೆಟ್ಟಿ ನಗ್ರಿಗುತ್ತು ವಂದಿಸಿದರು. ಶಿಕ್ಷಕ ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...