ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಠಾಣೆಯ ‌ಇನ್ಸ್ ಪೆಕ್ಟರ್ ವಿವೇಕಾನಂದ ಅವರ ನೇತ್ರತ್ವದ ತಂಡ ಬಂಧಿಸಿದೆ.

ನೆಹರುನಗರ ಅಕ್ಬರ್, ಗುರುವಾಯನಕೆರೆ ಸಿದ್ದೀಕ್, ಪುಂಜಾಲಕಟ್ಟೆ ಸಮೀರ್ ಬಂಧಿತ ಆರೋಪಿಗಳು.
ಇತ್ತೀಚೆಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ಲ್ಲಿ ಎರಡು ಬೈಕ್ ಕಳವು ಮಾಡಿದ ಪ್ರಕರಣದಲ್ಲಿ ಈ ಮೂವರು ಆರೋಪಿಗಳ ಬಂಧನ ಮಾಡಲಾಗಿದೆ.
ಬಂಟ್ವಾಳ ಸಮೀಪದ
ಮಣಿಹಳ್ಳ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಹಾಗೂ ಬಿಸಿರೋಡು ರೈಲ್ವೆ ನಿಲ್ದಾಣ ದಲ್ಲಿ ನಿಲ್ಲಿಸಿದ್ದ
ಬೈಕ್ ಗಳ ಕಳ್ಳತನ ನಡೆದಿದ್ದು, ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಬಂಧನ ದ ಬಳಿಕ ಆರೋಪಿಗಳಿಂದ ಕಳ್ಳತನ ಮಾಡಿದ್ದ ಎರಡು ಬೈಕ್ ಹಾಗೂ
ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗಳನ್ನು ಪೋಲೀಸ್ ಕಸ್ಟಡಿಗೆ ನೀಡಿದೆ‌.
ಕಾರ್ಯಚರಣೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್, ಅಪರಾಧ ವಿಭಾಗದ ಎಸ್.ಐ.ಕಲೈಮಾರ್, ಸಿಬ್ಬಂದಿಗಳಾದ ಇರ್ಶಾದ್, ಗಣೇಶ್ ನೆಟ್ಲ, ಮನೋಹರ್, ಪ್ರವೀಣ್, ಮೋಹನ್, ನಾಗರಾಜ್ , ವನಿತಾ, ನಾರಾಯಣ,ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here