ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಬಿ.ಸಿ.ರೋಡ್ ಮತ್ತು ಮಂಡಾಡಿ ವಲಯದ ವತಿಯಿಂದ ಬಿ.ಸಿ.ರೋಡ್ ಬಿ.ಮೂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.
ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ ಸಸಿ ನೆಡುವ ಹಾಗೂ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಸ್ಯ ಸಂರಕ್ಷಣೆ ಹಾಗೂ ಸಂವರ್ಧನೆಯ ಮೂಲಕ ಪರಿಸರ ಉಳಿಸುವುದರ ಜೊತೆಗೆ ಮನುಷ್ಯ ಉತ್ತಮ ವರ್ತನೆ ಹಾಗೂ ದುಶ್ಚಟಮುಕ್ತನಾಗಿ ಸಮಾಜದಲ್ಲಿ ಎಲ್ಲರೊಡನೆ ಬೆರೆತು ಬಾಳುವ ಮೂಲಕ ಉತ್ತಮ ಪರಿಸರವನ್ನು ನಿರ್ಮಿಸುವ ಅಗತ್ಯ ಇಂದು ಇದೆ ಎಂದವರು ಹೇಳಿದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ಸುಶೀಲಾ, ಒಕ್ಕೂಟದ ಪ್ರತಿನಿಧಿ ಮಮತಾ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಆಶಾಲತಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.