ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಘಟಕಗಳ ಆಶ್ರಯದಲ್ಲಿ ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ಕಾರ್ಮಿಕ ನೀತಿಯ ವಿರುದ್ಧ ಬಿ. ಸಿ ರೋಡಿನ ತಾಲೂಕು ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷರಾದ ಮನೋಹರ್ ನೇರಂಬೋಳು, ಪಾಣೆಮಂಗಳೂರು ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷರಾದ ಉಮೇಶ್ ನೆಲ್ಲಿಗುಡ್ಡೆ,ದ. ಕ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಲೋರೆನ್ಸ್ ಡಿ’ಸೋಜ,ಜಿಲ್ಲಾ ಉಪಾಧ್ಯಕ್ಷರಾದ ಪುರುಷೋತ್ತಮ ಪೂಜಾರಿ,ದ. ಕ ಜಿಲ್ಲಾ ಅಸಂಘಟಿತ ಕಾರ್ಮಿಕ ಸಂಘದ ಅಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎಂ ಎಸ್ ಮೊಹಮ್ಮದ್, ಪುರಸಭಾ ಉಪಾಧ್ಯಕ್ಷರಾದ ಶ್ರೀಮತಿ ಜೇಸಿಂತ ಡಿ ಸೋಜ,ಪುರಸಭಾ ಸದಸ್ಯರಾದ ಸಿದ್ಧಿಕ್ ಗುಡ್ಡೆಯಂಗಡಿ,ಸದಾಶಿವ ಬಂಗೇರ,ಲೋಲಾಕ್ಷ ಶೆಟ್ಟಿ, ವಾಸು ಪೂಜಾರಿ,ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ,ಪಿಯೂಸ್ ಎಲ್ ರೊಡ್ರಿಗಸ್,ದ. ಕ ಕಿಸಾನ್ ಘಟಕದ ಅಧ್ಯಕ್ಷರಾದ ಮೋಹನ್ ಕಲ್ಮಂಜ,ಬಂಟ್ವಾಳ ಕಸಬಾ ವಲಯ ಪ್ರಧಾನಕಾರ್ಯದರ್ಶಿ ದಯಾನಂದ್ ನೇರಂಬೋಳು,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ,ಅಲ್ಬರ್ಟ್ ಮೆನೇಜಸ್,ಜಗದೀಶ್ ಕೊಯಿಲ,ಪಿ. ರಹೀಮ್ ಮೊದಲಾದವರು ಉಪಸ್ಥಿತರಿದ್ದರು.