ಬಂಟ್ವಾಳ : ಸಂತ ಬಾರ್ಥ ಲೋಮೀಯರ ಹಿರಿಯ ಪ್ರಾಥಮಿಕ ಶಾಲೆ ಕುಕ್ಕಿಪಾಡಿ ಇದರ ಶಿಕ್ಷಣ ಸೇವೆಯನ್ನು ನಿರಂತರವಾಗಿ ಮುಂದುವರಿಸುವ ಬಗ್ಗೆ ಕುಕ್ಕಿಪಾಡಿ ಶಾಲಾ ಹಿತ ಚಿಂತಕರ ಸಮಿತಿ ರಚನೆ ಇಂದು ಕುಕ್ಕಿಪಾಡಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಪ್ರಸ್ತುತ ಈ ಶಾಲೆಯಲ್ಲಿ 1ರಿಂದ 7ನೇ ತರಗತಿಯವರೆಗೆ 73 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಶಾಲೆಯಲ್ಲಿ ಶಿಕ್ಷಕರ ಕೊರತೆಯಿದ್ದು ಶಿಕ್ಷಣವನ್ನು ನಿಭಾಯಿಸಲು ಕಷ್ಟ ವಾಗುತ್ತಿದ್ದು ಊರಿನ ಮಕ್ಕಳ ಶಿಕ್ಷಣದ ಭವಿಷ್ಯವನ್ನು ಮನದಲ್ಲಿಟ್ಟುಕೊಂಡು ಈ ಸಮಿತಿಯನ್ನು ರಚನೆ ಮಾಡಲಾಯಿತು.
ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಊರ ನಾಗರೀಕರು ಉಪಸ್ಥಿತರಿದ್ದರು.