Saturday, April 20, 2024

ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ: ಕಮರಿಗೆ ಉರುಳಿ ಬಿದ್ದ ಕಾರು ಪವಾಡಸದೃಸ ಪಾರು

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಗಿರೀಶ್ ಮಾರ್ನಬೈಲು ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಾಗಿದ್ದಾರೆ.
ಗಿರೀಶ್ ಅವರು ಪ್ಲಂಬರ್ ಕೆಲಸಗಾರನಾಗಿದ್ದು, ಇಂದು ಬೆಳಿಗೆ ತನ್ನ ದ್ವೀಚಕ್ರದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಬೈಕ್ ಸವಾರನ ಎರಡು ಕಾಲು ಹಾಗೂ ಕೈಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು ಆತ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದಿದೆ.
ಕಾರಿನಲ್ಲಿದ್ದ ವ್ಯಕ್ತಿಗಳು ಯಾವುದೇ ಪ್ರಾಣಾಪಾಯ ವಿಲ್ಲದೆ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಮೂರ್ತಿ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...