ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ (Karnataka 2nd PUC Result ) ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ನಾಳೆ ಜೂನ್ 18ರಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.
ಪಿಯುಸಿ ಫಲಿತಾಂಶವನ್ನು ವೀಕ್ಷಿಸಲು ಕೆಳಗೆ ನೀಡುವ ಮಾಹಿತಿಯನ್ನು ಅನುಸರಿಸಿ. ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಅಧಿಕೃತವಾಗಿ ಫಲಿತಾಂಶ ಘೋಷಿಸಿದ ನಂತರ ಫಲಿತಾಂಶವು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಲಭ್ಯವಿರುತ್ತವೆ. ಏಪ್ರಿಲ್ 22ರಿಂದ ಮೇ 18ರ ವರೆಗೆ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು.
ಹಿಜಾಬ್ ವಿವಾದದ ನಡುವಲ್ಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿತ್ತು. ಅಲ್ಲದೇ ಈ ಹಿಜಾಬ್ ವಿಚಾರಕ್ಕೆ ಈ ಬಾರಿಯ ಪಿಯುಸಿ ಪರೀಕ್ಷಾ ಫಲಿತಾಂಶ ಹೆಚ್ಚು ಕುತೂಹಲವನ್ನು ಮೂಡಿಸಿದೆ. ಈ ಬಾರಿ ದ್ವಿತೀಯ ಪಿಯುಸಿ ಪರಿಕ್ಷೆಗೆ ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ ಅನುಸರಿಸಿ ಫಲಿತಾಂಶವನ್ನು ಪಡೆಯಬಹುದಾಗಿದೆ.
Karnataka 2nd PUC Result ಫಲಿತಾಂಶವನ್ನು ವೀಕ್ಷಿಸಲು ಈ ಮಾರ್ಗವನ್ನು ಅನುರಿಸಿ :
- ಮೊದಲನೆಯದಾಗಿ, ಕರ್ನಾಟಕ ಪೂರ್ವ ವಿಶ್ವವಿದ್ಯಾಲಯದ ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
- ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ, ಪುಟದಲ್ಲಿ ಕೆಳಗೆ ಸ್ಕ್ರಾಲ್ ಮಾಡಿ ಮತ್ತು 2 ನೇ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಮುಂದೆ, ನಿಮ್ಮನ್ನು ಇನ್ನೊಂದು ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
- ಈ ಪುಟದಲ್ಲಿ, ನಿಮ್ಮ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕದಂತಹ ನಿಮ್ಮ ಮಾಹಿತಿಯನ್ನು ನೀವು ನಮೂದಿಸಬೇಕು.
- ಅದರ ನಂತರ, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
- ನೀವು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿದ ತಕ್ಷಣ, ಫಲಿತಾಂಶವು ನಿಮ್ಮ ಪರದೆಯ ಮೇಲೆ ಗೋಚರಿಸುತ್ತದೆ.
- ಭವಿಷ್ಯದ ಉಲ್ಲೇಖಕ್ಕಾಗಿ ನೀವು ಫಲಿತಾಂಶವನ್ನು ನಿಮ್ಮ ಕಂಪ್ಯೂಟರ್‌ನಲ್ಲಿ ಉಳಿಸಬಹುದು ಮತ್ತು ಮುದ್ರಣವನ್ನು ಸಹ ತೆಗೆದುಕೊಳ್ಳಬಹುದು.