Wednesday, April 10, 2024

ಪುಣಚ: ಗ್ರಾಮ ಸಭೆ

ವಿಟ್ಲ:ಖಾಸಗಿ ವ್ಯಕ್ತಿಯೊಬ್ಬರು ಅತಿಕ್ರಮಿಸಿದ ಅಗ್ರಾಳ-ಕೊಪ್ಪಳ ಪಂಚಾಯತ್ ರಸ್ತೆಯನ್ನು ತೆರವು ಗೊಳಿಸುವ ನಿಟ್ಟಿನಲ್ಲಿ ಗ್ರಾ.ಪಂ ಮುತುವರ್ಜಿ ತೋರಿಸುತ್ತಿಲ್ಲ.
ಜನಜೀವನ ಮಾರಕವಾಗಿರುವ 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಗ್ರಾಮ ವ್ಯಾಪ್ತಿಗೆ ಪ್ರವೇಶಿಸದಂತೆ ಲಿಖಿತ ಮನವಿ ಸಲ್ಲಿಸಬೇಕು.

ಪುಣಚ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಗ್ರಾಮ ಪಂಚಾಯಿತಿಯ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತಮ್ಮ ಅಹವಾಲು ತೋಡಿಕೊಂಡರು.
ಗ್ರಾಮ ಅಭಿವೃದ್ಧಿಯ ದೃಷ್ಟಿಯಿಂದ ಡಿಸಿ ಗ್ರಾಮ ವಾಸ್ತವ್ಯ ನಡೆಸುವಂತೆ ಒತ್ತಾಯಿಸಬೇಕು.

ಸ್ಮಶಾನವೇ ಇಲ್ಲದಿದ್ದಾಗ ರಸ್ತೆ ಅಭಿವೃದ್ಧಿಯ ಹೆಸರಿನಲ್ಲಿ ಅನುದಾನ ಇಟ್ಟು ಏನು ಪ್ರಯೋಜನ. ಕೊರಗ ಸಮುದಾಯದವರನ್ನು ಮುಖ್ಯ ಸಮಾಜದ ಕಡೆಗೆ ತರಲು ಪಂಚಾಯಿತಿಯ ಕಡೆಯಿಂದ ಪ್ರಯತ್ನ ನಡೆಯಬೇಕು. ಅಂಬೇಡ್ಕರ್ ನಿಗಮದ ಅಧಿಕಾರಿಗಳಿಗೆ ಯಾರು ಆಮಂತ್ರಣ ನೀಡಬೇಕು. ಪುಣಚದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ನಡೆಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಅಧ್ಯಕ್ಷತೆ ವಹಿಸಿದ್ದ ರಾಮಕೃಷ್ಣ ಮೂಡಂಬೈಲು ಮಾತನಾಡಿ ಗ್ರಾಮಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕಾಳಜಿಯಿಂದ  ಪೂರಕವಾದ ಆರೋಗ್ಯಕರ ಚರ್ಚೆ ನಡೆದಿದೆ. ಗ್ರಾಮಸಭೆಯಲ್ಲಿ ನಿರ್ಣಯಿಸಲಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು.

ಮಾರ್ಗದರ್ಶಿ ಅಧಿಕಾರಿಯಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಉಷಾ ಭಾಗವಹಿಸಿದ್ದರು. ಉಪಾಧ್ಯಕ್ಷೆ ಪ್ರತಿಭಾ, ಸದಸ್ಯರಾದ ಲಲಿತ, ಗಿರಿಜ, ಬೇಬಿ, ಗಂಗಮ್ಮ, ರವಿ, ಮಹೇಶ್ ಶೆಟ್ಟಿ, ಹರೀಶ್ ಪೂಜಾರಿ, ಸರೋಜಿನಿ, ಸುಜಾತ, ಉದಯ ದಂಬೆ,  ರೇಖಾ, ರೇಶ್ಮಾ, ತೀರ್ಥರಾಮ, ಅಶೋಕ್ ಕುಮಾರ್, ಆನಂದ ನಾಯ್ಕ, ವಾಣಿಶ್ರೀ, ರಾಜೇಶ್ ನಾಯ್ಕ, ಶಾರದಾ, ಪಿ.ಡಿ.ಓ. ಲಾವಣ್ಯ ಪಿ. ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮಸ್ಥರ ಪರವಾಗಿ ಜಯಪ್ರಕಾಶ್ ಕೋಡಂದೂರು, ವೆಂಕಟ್ರಮಣ ನಾಯಕ್ ಆಜೇರು, ಶ್ರೀಧರ ಶೆಟ್ಟಿ ಬೈಲುಗುತ್ತು, ವಿಶ್ವನಾಥ ರೈ ಕೋಡಂದೂರು, ರಾಜೇಂದ್ರ ರೈ ಬಿ. ಹತ್ತಾರು ಅಹವಾಲು ಸಲ್ಲಿಸಿದರು.

ಬೆರಳೆಣಿಕೆಯ ಇಲಾಖಾಧಿಕಾರಿಗಳು ಭಾಗಿ..

ಗ್ರಾಮ ಪಂಚಾಯಿತಿಯಿಂದ ಸುಮಾರು 22 ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ, ತೋಟಗಾರಿಕಾ ಇಲಾಖೆ, ಪೊಲೀಸ್ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...