Friday, April 5, 2024

ಮಾಜಿ ಸಚಿವ ಬಿ.ರಮಾನಾಥ ರೈ ನೇತ್ರತ್ವದಲ್ಲಿ ಬೂತ್ ಅಧ್ಯಕ್ಷರ ಮನೆ ಮನೆ ಬೇಟಿ “ನಮ್ಮ ನಡೆ ಬೂತ್ ಕಡೆ”

ನಾವೂರ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಬೂತ್ ಅಧ್ಯಕ್ಷರ ಮನೆ ಮನೆ ಬೇಟಿ “ನಮ್ಮ ನಡೆ ಬೂತ್ ಕಡೆ” ಕಾರ್ಯಕ್ರಮವು ಮಾಜಿ ಸಚಿವ ಬಿ.ರಮಾನಾಥ ರೈಯವರ ಮಾರ್ಗದರ್ಶನದಲ್ಲಿ ನಡೆಯಿತು ಕಾರ್ಯಕ್ರಮವನ್ನು ಉದ್ಘಾಟಿಸಿದ ರೈಯವರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಜಾತಿ-ಜಾತಿಯ ಮಧ್ಯೆ ಧರ್ಮ-ಧರ್ಮದ ಮಧ್ಯೆ ನಡೆಯುವ ಬೆಳವಣಿಗೆಗಳು ಅಪಾಯಕಾರಿಯಾಗಿದ್ದು ಕಾಂಗ್ರೆಸ್ ಪಕ್ಷವು ಯಾವುದೇ ಕಾರಣಕ್ಕೂ ಇಂತಹ ಪ್ರಚೋದನೆಯನ್ನು ಸಹಿಸುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು ಮುಂ¨ರುವ ಯಾವುದೇ ಚುನಾವಣೆಯನ್ನು ಕಾರ್ಯಕÀರ್ತರು ಗಂಭೀರವಾಗಿ ಪರಿಗಣಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಟಿಬದ್ದರಾಗುವಂತೆ ಕರೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಮಾತನಾಡಿ ಕಾರ್ಯಕರ್ತರ ಒಗ್ಗಟ್ಟು ಹಾಗೂ ಪರಿಶ್ರಮದಿಂದ ಮಾತ್ರ ಪಕ್ಷ ಬಲಿಷ್ಠವಾಗಲು ಸಾಧ್ಯವಾದಿತು ಎಂದು ತಿಳಿಸಿದರು. ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ತಕ್ಷಣದಿಂದಲೇ ಎಚ್ಚೆತ್ತುಕೊಂಡು ಒಗ್ಗಟ್ಟಾಗಿ ಚುನಾವಣೆ ಎದುರಿಸಲು ಸಜ್ಜಾಗೋಣ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಮಾಜಿ ಅಕ್ರಮ ಸಕ್ರಮ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಪುರಸಭಾ ಸದಸ್ಯರಾದ ಜನಾರ್ದನ ಚೆಂಡ್ತಿಮಾರ್, ಪಂಚಾಯತ್ ಅಧ್ಯಕ್ಷರಾದ ಉಮೇಶ್ ಕುಲಾಲ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪುಷ್ಪರಾಜ್ ನಾವೂರ, ಗ್ರಾಮ ಪಂಚಾಯತ್ ಸದಸ್ಯರಾದ ಸುವರ್ಣಕುಮಾರ್ ಜೈನ್, ಎಮ್.ಕೆ.ಮೊಹಮ್ಮದ್, ಲವೀನ ಶಾಂತಿ, ಜ್ಯೋತಿ, ಬೂತ್ ಸಮಿತಿ ಅಧ್ಯಕ್ಷರಾದ ಜಾನ್ ಕೀಶೋರ್, ಮೊಹಮ್ಮದ್ ಹನೀಫ್ ಮುSಂಡರಾದ ವಾಸು ಪೂಜಾರಿ, ಪೂವಪ್ಪ ಪೂಜಾರಿ, ವಿಶ್ವನಾಥ ಪೂಜಾರಿ, ಶ್ರೀನಿವಾಸ, ಶರತ್ ಕುಮಾರ್, ವಿಜಯ ಅಲ್ಲಿಪಾದೆ, ಪದ್ಮಶೇಖರ್ ಜೈನ್ ಬೀದಿ, ಹಕೀಂ, ಕರೀಂ, ಸುಲೈಮಾನ್, ಮಹೇಶ್, ಗಣೇಶ್ ಕುಲಾಲ್, ಅಝೀಜಾ ನಾವೂರ, ಅಬೂಬುಕರ್ ಪಲ್ಲಿಗುಡ್ಡೆ, ಆದಂ ಪಲ್ಲಿಗುಡ್ಡೆ, ಲಕ್ಷಣ ಬೀದಿ, ಮುಸ್ತಾಫ ಪಲ್ಲಿಗುಡ್ಡೆ, ಜಾನೇಟ್ ಪಿಂಟೋ ಉಪಸ್ಥಿತರಿದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...