ಬಂಟ್ವಾಳ: ಬಂಟ್ವಾಳ ತಾ. ಅಜ್ಜಿಬೆಟ್ಟು ಗ್ರಾಮದ ಅತಿಶಯ ಕ್ಷೇತ್ರ ಅಜ್ಜಿಬೆಟ್ಟು ಭ| ೧೦೦೮ ಶ್ರೀ ಆದಿನಾಥ ತೀರ್ಥಂಕರರ ಬಸದಿಯಲ್ಲಿ ಮುನಿಶ್ರೀ ೧೦೮ ದಿವ್ಯಸಾಗರ ಮಹಾರಾಜರ ಭವ್ಯ ಮಂಗಲ ವರ್ಷಾಯೋಗ ಹಾಗೂ ಚಾತುರ್ಮಾಸ ನಿಮಿತ್ತ ಕಲಶ ಸ್ಥಾಪನಾ ಮಹೋತ್ಸವ ಮತ್ತು ಬಸದಿ ಸಮುಚ್ಚಯದಲ್ಲಿ ಸುಮಾರು 1 ಕೋ.ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಪದ್ಮಾವತಿ ಸಭಾಭವನದ ಉದ್ಘಾಟನಾ ಕಾರ್ಯಕ್ರಮ ಜು.14ರಂದು ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ, ಪದ್ಮವಿಭೂಷಣ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಕಾರ್ಕಳ ಶ್ರೀ ಜೈನಮಠ ದಾನಶಾಲಾ ಇದರ ರಾಜಗುರು ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಹಾಗೂ ಮೂಡುಬಿದಿರೆ ಜೈನ ಮಠದ ಭಾರತ ಭೂಷಣ ಸ್ವಸ್ತಿಶ್ರೀ ಭಟ್ಟಾರಕ ಚಾರಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳವರು ಮತ್ತು ಹೊಂಬುಜ ಜೈನಮಠ ಡಾ| ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಆಶೀರ್ವಚನ ನೀಡಲಿರುವರು.
ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು,ಮಾಜಿ ಸಚಿವರಾದ ಬಿ.ರಮಾನಾಥ ರೈ, ಕೆ.ಅಭಯಚಂದ್ರ ಜೈನ್, ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ರಾಜೇಂದ್ರ ಅವರು ಅತಿಥಿಗಳಾಗಿ ಭಾಗವಹಿಸುವರು ಎಂದು ಆಡಳಿತ ಸಮಿತಿ ಪ್ರಕಟನೆ ತಿಳಿಸಿದೆ.