Friday, April 12, 2024

ಶಿಕ್ಷಕಿ ತ್ರಿವೇಣಿ ಅವರಿಗೆ ಡಾಕ್ಟರೇಟ್ ಪದವಿ

ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಬಂಟ್ವಾಳ ತಾಲ್ಲೂಕು, ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇದರ ಸಹಶಿಕ್ಷಕಿ ಶ್ರೀಮತಿ ತ್ರಿವೇಣಿಯವರಿಗೆ ಜುಲೈ 24ರಂದು ಗೋವಾದಲ್ಲಿ  ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ಒಂಟಾರಿಯೋ, ಕೆನಡಾದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

     ಕಳೆದ 15 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಮಾತ್ರವಲ್ಲದೇ, ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಇವರು 2019- 20 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಬಾಜನರಾದ ಇವರು ಬಂಟ್ವಾಳ ತಾಲ್ಲೂಕು ಮೆಲ್ಕಾರ್ ಶಾಖೆಯ ಮೆಸ್ಕಾಂ ಉದ್ಯೋಗಿ ಮುಜಲ ರಮೇಶ್ ಪೂಜಾರಿಯವರ ಧರ್ಮ ಪತ್ನಿಯಾಗಿದ್ದಾರೆ.

More from the blog

ಪ್ರಧಾನಿ ರೋಡ್ ಶೋ ಹಿನ್ನೆಲೆ : ಜೇನುಗೂಡು ತೆರೆವುಗೊಳಿಸಲು ಮಂಗಳೂರು ಪೊಲೀಸ್ ಆಯುಕ್ತರ ಆದೇಶ

ಮಂಗಳೂರು: ನಗರದಲ್ಲಿ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯಲಿರುವ ಮಾರ್ಗದಲ್ಲಿ ಇರುವ ಎಲ್ಲ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್‌ ಅವರು ಉಪಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ...

ಗುದನಾಳದಲ್ಲಿದ್ದ 58 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ದಮ್ಮಾಮ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ 58,78,880 ರೂಪಾಯಿ ಮೌಲ್ಯದ 812 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ವಾಡಿಕೆಯ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದಿಂದ ಬೀಪ್...

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...