ಬಂಟ್ವಾಳ: ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಹೊಸ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನಾ ಸಮಾರಂಭ ಆಸ್ಪತ್ರೆಯ ಆವರಣದಲ್ಲಿ ನಡೆಯಿತು.
ಮಂಗಳೂರು ಬಿಷಪ್ ರೆ| ಡಾ| ಪೀಟರ್ ಪೌಲ್ ಸಲ್ದಾನಾ ಅವರು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಫಾದರ್ ಮುಲ್ಲರ್ ಸಂಸ್ಥೆಗಳು ಪ್ರತಿಯೊಬ್ಬರ ಆರೋಗ್ಯದ ಕುರಿತು ವಿಶೇಷ ಕಾಳಜಿಯೊಂದಿಗೆ ಸೇವೆ ನೀಡುತ್ತಿದ್ದು, ಕಳೆದ ಹಲವು ವರ್ಷಗಳಿಂದ ತುಂಬೆಯಲ್ಲಿ ಆಸ್ಪತ್ರೆಯನ್ನು ಮುನ್ನಡೆಸುತ್ತಿದೆ. ತುಂಬೆಯಲ್ಲಿ ಆಸ್ಪತ್ರೆ ಸ್ಥಾಪಿಸಿದ ಅಹ್ಮದ್ ಹಾಜಿ ಅವರ ಆಶಯಗಳಿಗೆ ಪೂರಕವಾಗಿ ಸೇವೆ ನೀಡುತ್ತಿದೆ. ಪ್ರಸ್ತುತ ಅದಕ್ಕೆ ಹೊಸದಾಗಿ ನರ್ಸಿಂಗ್ ಕಾಲೇಜು ಸೇರ್ಪಡೆಗೊಳ್ಳಲಿದೆ ಎಂದು ಶುಭಹಾರೈಸಿದರು.
ಸಮಾರಂಭದಲ್ಲಿ ಬಿಷಪ್ ಅವರು ನೂತನ ನರ್ಸಿಂಗ್ ಕಾಲೇಜಿನ ನಕಾಶೆಯನ್ನು ಬಿಡುಗಡೆಗೊಳಿಸಿದರು. ತುಂಬೆ ಬಿ.ಎ.ಗ್ರೂಪ್‌ನ ಆಡಳಿತ ನಿರ್ದೇಶಕ ಅಬ್ದುಲ್ ಸಲಾಂ, ತುಂಬೆ ಪಂಚಾಯತ್ ಅಧ್ಯಕ್ಷ ಪ್ರವೀಣ್ ತುಂಬೆ, ತುಂಬೆ ಆಸ್ಪತ್ರೆಯ ವೈದ್ಯಕೀಯ ಅಧ್ಯಕ್ಷಕ ಡಾ| ಕಿರಣ್ ಶೆಟ್ಟಿ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಧನ್ಯಾ ದೇವಸ್ಯ, ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನ್‌ಗಳು ಉಪಸ್ಥಿತರಿದ್ದರು.
ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ರೆ| ಫಾ| ರಿಚ್ಚಾರ್ಡ್ ಅಲೋಶಿಯಸ್ ಕುವೆಲ್ಹೊ ಸ್ವಾಗತಿಸಿದರು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ಫಾ| ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ ವಂದಿಸಿದರು. ಸಿಸ್ಟರ್ ವಿಲ್ಮಾ ಅವರು ಕಾರ್ಯಕ್ರಮ ನಿರ್ವಹಿಸಿದರು.