Saturday, April 13, 2024

ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನ ಆಟಿ ಅಮವಾಸ್ಯೆ ತೀರ್ಥಸ್ನಾನ

ಬಂಟ್ವಾಳ : ಬಂಟ್ವಾಳ ತಾಲೂಕು ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಗುರುವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ ಜರಗಿತು.

ಅರ್ಚಕರಾದ ಜಯಶಂಕರ ಉಪಾಧ್ಯಾಯ ಮತ್ತು ಮಿಥುನ್ ಭಟ್ ನಾವಡ ಅವರು ವಿವಿಧ ಪೂಜೆಗಳನ್ನು ನೆರವೇರಿಸಿದರು. ಸಾವಿರಾರು ಭಕ್ತಾದಿಗಳು ಆಗಮಿಸಿ ಇಲ್ಲಿನ ಗದಾತೀರ್ಥ, ಉಂಗುಷ್ಠ ತೀರ್ಥ ಹಾಗೂ ಜಾನು ತೀರ್ಥಗಳೆಂಬ ಕೆರೆಗಳಲ್ಲಿ ತೀರ್ಥಸ್ನಾನ ಮಾಡಿ ಬಾಗಿನ ಅರ್ಪಿಸಿದರು. ಬಳಿಕ ಶ್ರೀ ಪಾರ್ವತೀ-ಪರಮೇಶ್ವರರನ್ನು ದರ್ಶಿಸಿ ಪ್ರಸಾದ ಸ್ವೀಕರಿಸಿದರು.  ಮಧ್ವ ಓಂಕಾರ ಫ್ರೆಂಡ್ಸ್ ಮತ್ತು ಓಂಕಾರ ಮಹಿಳಾ ಘಟಕ ವತಿಯಿಂದ ಬೆಳಗ್ಗೆ ಪಾಲೆಯ ಕೆತ್ತೆ ಕಷಾಯ ವಿತರಣೆ ನಡೆಯಿತು. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ  ಚಂದ್ರಶೇಖರ ಶೆಟ್ಟಿ ಪುಳಿಮಜಲು, ಸಮಿತಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದ್ದುದರಿಂದ ವಾಹನ ದಟ್ಟಣೆ ಹೆಚ್ಚಾಗಿದ್ದು ಬಂಟ್ವಾಳ ಗ್ರಾಮಾಂತರ, ಟ್ರಾಫಿಕ್ ಮತ್ತು ಪುಂಜಾಲಕಟ್ಟೆ ಪೊಲೀಸರು  ವಾಹನ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದರು. ಮಧ್ವ ಶಿವಾಜಿ ಬಳಗ ಮತ್ತು ಶಿವಾಜಿ ಮಾತೃ ಬಳಗ, ವಿ.ಹಿಂ.ಪ., ಬಜರಂಗದಳ ಕಾವಳಮೂಡೂರು, ರಾಮ್‌ಸೇನಾ ಓಂಕಾರ ಘಟಕ ಕಾರಿಂಜ, ಉತ್ಸಾಹಿ ತರುಣ ವೃಂದ ವಗ್ಗ, ಗೋಕುಲ್ ಫ್ರೆಂಡ್ಸ್ ಗೋಕುಲ್ ನಗರ ಅವರು ಸಹಕರಿಸಿದ್ದರು. ಬಂಟ್ವಾಳ ಅಗ್ನಿಶಾಮಕದಳ ಲೈಫ್ ಬೋಟ್ ಸಹಿತ ಕರ್ತವ್ಯ ನಿರ್ವಹಿಸಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...