Sunday, April 14, 2024

ಬೆಳಗ್ಗಿನ ಜಾವ ಮನೆಯ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಮನೆಯೊಳಗೆ ಮಲಗಿದ್ದ ಮೂವರು ಅದೃಷ್ಟವಶಾತ್ ಪಾರು

ಬಂಟ್ವಾಳ: ಬೃಹತ್ ಮರವೊಂದು ಮನೆಯೊಂದರ ಮೇಲೆ ಬಿದ್ದ ಘಟನೆ ಶುಕ್ರವಾರ ಬೆಳಗ್ಗಿನ ಜಾವ ಮಾಣಿ-ಮೈಸೂರು‌ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದ್ದು, ಮನೆಯೊಳಗೆ ಮಲಗಿದ್ದ ಮೂವರೂ ಅದೃಷ್ಟವಶಾತ್ ಪಾರಾಗಿದ್ದಾರೆ.

ಕೊಡಾಜೆಯ ಅಪಾಯಕಾರಿ‌ ತಿರುವಿನಲ್ಲಿರುವ ಸಂಜೀವ ಶೆಟ್ಟಿ ಎಂಬವರಿಗೆ ಸೇರಿದ ಮನೆಗೆ ಘಟನೆಯಿಂದ ಭಾರೀ ಹಾನಿ ಸಂಭವಿಸಿದ್ದು, ಈ ಮನೆಯಲ್ಲಿ ಬಾಡಿಗೆಗೆ ಇದ್ದ ಮೂವರು ಕಾರ್ಮಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಮನೆಯ ಪಕ್ಕದಲ್ಲಿದ್ದ ಬೃಹತ್ ಮರ ಬೆಳಗಿನ‌ಜಾವ 3.30 ರ ಸುಮಾರಿಗೆ ಬಿದ್ದಿದ್ದು, ಬಿದ್ದ ರಭಸದ ತೀವ್ರತೆಗೆ ತೆಂಗಿನ ಮರವೊಂದು ಮುರಿದುಬಿದ್ದಿದ್ದು, ಮರದ ಗೆಲ್ಲುಗಳು ಹೆದ್ದಾರಿಯನ್ನೂ ಆವರಿಸಿದ ಹಿನ್ನೆಲೆಯಲ್ಲಿ ಕೆಲಸಮಯಗಳ ಕಾಲ ಹೆದ್ದಾರಿಯಲ್ಲಿ ವಾಹಬ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮಾಣಿ ಗ್ರಾ.ಪಂ.ಸದಸ್ಯ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯವರು ಸ್ಥಳಕ್ಕೆ ತೆರಳಿದ್ದು, ಸ್ಥಳೀಯರ ನೆರವಿನೊಂದಿಗೆ ಬಿದ್ದಿದ್ದ ಮರದ ತೆರವಿಗೆ ಸಹಕರಿಸಿದರು.

ಘಟನೆಯಿಂದಾಗಿ ಮನೆ ಯ, ಛಾವಣಿ ಗೋಡೆ ಹಾಗೂ ಸಿಟೌಟ್ ಗೆ ತೀವ್ರ ಹಾನಿಯಾಗಿದ್ದು, ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಕಂದಾಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...