ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಿ.ಸಿ.ರೋಡು ಇದರ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತ್ತಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಶೆಟ್ಟಿ ಮೊಡಂಕಾಪುಗುತ್ತು, ಉಪಾಧ್ಯಕ್ಷರಾಗಿ ಸುರೇಶ್ ಕುಮಾರ್ ಕೈಕಂಬ, ಜೊತೆಕಾರ್ಯದರ್ಶಿಯಾಗಿ ಭಾಸ್ಕರ್ ಟೈಲರ್ ಕಾಮಾಜೆ, ಕೋಶಾಧಿಕಾರಿಯಾಗಿ ಶ್ರೀಧರ್ ಶೆಣೈ ಬಿ.ಸಿ.ರೋಡು ಇವರನ್ನು ಆರಿಸಲಾಯಿತು.