Friday, April 5, 2024

ನೇತ್ರಾವತಿ ನದಿಗೆ ಈಜಲು ಹೋದ ಐವರು ಸ್ನೇಹಿತರು; ಓರ್ವ ನೀರು ಪಾಲು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋಗಿರುವ ಕಾಲೇಜು ಬಾಲಕರ ತಂಡ, ಒರ್ವ ನೀರು ಪಾಲು ಇನ್ನೋರ್ವ ಆಸ್ಪತ್ರೆಗೆ ದಾಖಲು.
ಬಂಟ್ವಾಳ ತಾಲೂಕಿನ ಸಜೀಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಗೆ ಭೋರ್ಗರೆಯುವ ನೇತ್ರಾವತಿ ನದಿಗೆ ಈಜಲು ಎಂದು ಹೋಗಿರುವ ಐವರು ಸ್ನೇಹಿತ ಬಾಲಕರ ತಂಡ, ಇದರಲ್ಲಿ ಓರ್ವ ಯುವಕ ನೀರು ಪಾಲಾದರೆ ಇನ್ನುಳಿದ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಅದರಲ್ಲಿ ಓರ್ವ ಬಾಲಕ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದು ಯಾವುದೇ ಅಪಾಯವಿಲ್ಲ ಎಂದು ಹೇಳಲಾಗುತ್ತಿದೆ.
ತಲೆಮೊಗರು ನಿವಾಸಿ ರುಕ್ಮಯ ಅವರ ಮಗ ಅಶ್ವಿಥ್ (19) ನೀರು ಪಾಲಾದ ಯುವಕ.
ಹರ್ಷಿತ್   ಂಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾನೆ.
ಉಳಿದಂತೆ ಸ್ನೇಹಿತ ರಾದ ಲಿಖಿತ್ , ವಿಕೇಶ್ , ವಿಶಾಲ್ ಅವರನ್ನು ರಕ್ಷಣೆ ಮಾಡಲಾಗಿದೆ‌.
ಸ್ನೇಹಿತರಾದ ಐವರು ಸಂಜೆ 4 ಗಂಟೆ ವೇಳೆಗೆ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದಾರೆ ಎಂದು ಹೇಳಲಾಗಿದೆ.
ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಮಿತಿಮೀರಿ ಹರಿಯುತ್ತಿದ್ದು ಅಪಾಯಕಾರಿ ಎಂದು ಗೊತ್ತಿದ್ದು, ಮಕ್ಕಳು ಈ ರೀತಿಯಲ್ಲಿ ನದಿಗೆ ಇಳಿಯುವುದರ ಬಗ್ಗೆ ಮನೆಯವರು ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ನೀರು ಪಾಲಾದ ಅಶ್ವಿಥ್ ನ ಪತ್ತೆಗಾಗಿ ಸ್ಥಳೀಯ ಮುಳುಗು ತಜ್ಞರ ಸಹಾಯ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ಮೂಲಕ ಹುಡುಕಾಟ ನಡೆಸಿದ್ದಾರೆ.ಆದರೆ ರಾತ್ರಿಯಾದರೂ ಹರ್ಷಿತ್ ಪತ್ತೆಯಾಗಿಲ್ಲ.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...