ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಬಾರಿ ಮಳೆಯಿಂದ ಬುಧವಾರ ಸಂಜೆ ಹೆನ್ರಿ ಕಾರ್ಲೊ ಅವರ ಮನೆಯ ಬಳಿಯ ಭೂಕುಸಿತ ದಿಂದ ಶೆಡ್ ನಲ್ಲಿ ಉಳಿದುಕೊಂಡು ರಬ್ಬರ್ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದು ಅದರಲ್ಲಿ ಮೂವರು ಮೃತಪಟ್ಟಿದ್ದು ಈ ಸ್ಥಳಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಕರೆಯ ಮೂಲಕ ಸೂಚಿಸಿದರು.
ಈ ಸಂದರ್ಭದಲ್ಲಿ ಪಿಯೂಸ್ ಎಲ್ ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದರ್ಶನ್ ಜೈನ್, ಸುರೇಶ್ ಜೋರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.