ಬಂಟ್ವಾಳ: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುವ ಮಳೆಯ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಶಾಲಾ ಕಾಲೇಜುಗಳಿಗೆ ಬಂಟ್ವಾಳ ತಹಶೀಲ್ದಾರ್ ರಜೆ ನೀಡಿದ್ದಾರೆ.
ದ.ಕ.ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ.ಅವರ ಅದೇಶದಂತೆ ಬಂಟ್ವಾಳ ಸಹಿತ ಮಳೆ ಅತೀಯಾಗಿರುವ ತಾಲೂಕಿನ ಶಾಲೆಗಳಿಗೆ ರಜೆ ಸಾರಲಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಳೆಯ ಕಾರಣಕ್ಕೆ ಇಂದು (ಶನಿವಾರ ಜು.30) ಬಂಟ್ವಾಳ ತಾಲೂಕು ಸಹಿತ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು ನಗರ, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸ್ಥಳೀಯ ಪರಿಸ್ಥಿತಿ ಕಂಡು ರಜೆಯ ನಿರ್ಧಾರ ತೆಗೆದುಕೊಳ್ಳುವಂತೆ ಡಿಸಿ ಆದೇಶಿಸಿದ್ದಾರೆ.