


ಬಂಟ್ವಾಳ; ಸಾರ್ವಜನಿಕರ ವಿರೋಧಕ್ಕೆ ಮಣಿದ ಜಿಲ್ಲಾಡಳಿತ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ ಎಂದು ಜಾರಿಗೆ ಮುಂದಾಗಿದ್ದ ಆದೇಶವನ್ನು ಹಿಂತೆಗೆದುಕೊಂಡಿದೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದ್ದರು.
ಈ ನಿರ್ಧಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಒತ್ತಡಕ್ಕೆ ಮಣಿದು ಜಿಲ್ಲಾಡಳಿತ ಆದೇಶ ರದ್ದುಗೊಳಿಸಿದೆ. ಇದೇ ವೇಳೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಇಳಿಕೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.


